News

ಅಪ್ಪು ಮನೆಗೆ ಭೇಟಿ ನೀಡಿದ ಸಿಎಂ..!

ಅಪ್ಪು ಮನೆಗೆ ಭೇಟಿ ನೀಡಿದ ಸಿಎಂ..!
  • PublishedNovember 8, 2021

ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಇಂದಿಗೆ (ನವೆಂಬರ್​ 8) 11 ದಿನ ಕಳೆದಿದೆ. ದೊಡ್ಮನೆ ಕುಟುಂಬಸ್ಥರ ಪೂಜಾ ಕಾರ್ಯವೆಲ್ಲ ಮುಗಿದಿದ್ದು, ಬೆಳಗ್ಗಿನಿಂದ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಿದ್ದ ನಿರ್ಭಂಧವನ್ನು ತೆರುವುಗೊಳಿಸಿ, ಅಪ್ಪು ಅಭಿಮಾನಿಗಳಿಗೆ ಸಮಾಧಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಫ್ಯಾನ್ಸ್​ ಮನದಲ್ಲಿನ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ. ಪ್ರತಿದಿನ ಸಮಾಧಿ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಬರುತ್ತಲೇ ಇದ್ದಾರೆ. ಈ ಹಿನ್ನೆಲೆಯಲ್ಲಿ ಮನೆ ಮತ್ತು ಸಮಾಧಿ ಬಳಿ ಪೊಲೀಸ್​ ಬಂದೋಬಸ್ತ್​ ಮಾಡಲಾಗಿತ್ತು. ಇತ್ತ ಸದಾಶಿವನಗರದ ಪುನೀತ್ ರಾಜಕುಮಾರ್ ಮನೆಯಲ್ಲೂ ಅಪ್ಪು ವಿಗೆ ಪೂಜೆ ಸಲ್ಲಿಸಲಾಗುತ್ತಿದ್ದು ಕನ್ನಡ ಚಿತ್ರರಂಗದ ನಟ ನಟಿಯರು ಹಿರಿಯ ಕಲಾವಿದರು ಭೇಟಿ ನೀಡಿದ್ದಾರೆ.

ಮಧ್ಯಾಹ್ನ 1:45ರ ಸುಮಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್​ ಮನೆಗೆ ಭೇಟಿ ನೀಡಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಇದ್ದು ಅವರು ತೆರಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಪುನೀತ್ ರಾಜ್‌ಕುಮಾರ್ ಆಸ್ಪತ್ರೆಗೆ ದಾಖಲಾದಾಗಿನಿಂದಲೂ ಜೊತೆಗೆ ಇದ್ದರು. ಪುನೀತ್ ರಾಜ್‌ಕುಮಾರ್ ಅವರಿಗೆ ಆಪ್ತರಾಗಿದ್ದ ಬಸವರಾಜ ಬೊಮ್ಮಾಯಿ ಭಾವುಕದ ವಿದಾಯವನ್ನು ಅಪ್ಪುಗೆ ಹೇಳಿದರು. ಅಪ್ಪು ನಿಧನವಾದ ದಿನದಿಂದ ಸತತ ಮೂರು ದಿನ ಕುಟುಂಬದ ಜೊತೆಗಿದ್ದು ಎಲ್ಲ ಕಾರ್ಯಗಳು ಸುಲಲಿತವಾಗಿ ನೆರವೇರುವಂತೆ ನೋಡಿಕೊಂಡಿದ್ದರು.

****

****

Written By
Kannadapichhar

Leave a Reply

Your email address will not be published. Required fields are marked *