News

ಆದಿಚುಂಚನಗಿರಿ ಶ್ರೀಗಳಿಂದ ಪುನೀತ್ ರಾಜಕುಮಾರ್ ಕುಟುಂಬಕ್ಕೆ ಸಾಂತ್ವನ

ಆದಿಚುಂಚನಗಿರಿ ಶ್ರೀಗಳಿಂದ ಪುನೀತ್ ರಾಜಕುಮಾರ್ ಕುಟುಂಬಕ್ಕೆ ಸಾಂತ್ವನ
  • PublishedDecember 2, 2021

ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜಕುಮಾರ್ ಅವರ ಕುಟುಂಬವನ್ನು ಭೇಟಿಯಾಗಿ ಆದಿಚುಂಚನಗಿರಿ ಶ್ರೀಗಳು ಸಾಂತ್ವನ ಹೇಳಿದ್ದಾರೆ.ಇಂದು ಪುನೀತ್ ರಾಜಕುಮಾರ್ ನಿವಾಸಕ್ಕೆ ಆಗಮಿಸಿದ ಆದಿಚುಂಚನಗಿರಿ ಶ್ರೀಗಳು ಅಪ್ಪು ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಬಳಿಕ ಮಾತನಾಡಿದ ಅವರು, ಕನ್ನಡ ಕಲಾ ಕ್ಷೇತ್ರಕ್ಕೆ ಪುನೀತ್ ರಾಜಕುಮಾರ್ ಅವರು ನೀಡಿದ ಕೊಡುಗೆ ಅಪಾರ. ಮೊದೊಲಿನಿಂದಲೂ ರಾಜಕುಮಾರ್ ಕುಟುಂಬಕ್ಕೆ ಮತ್ತು ಮಠಕ್ಕೆ ಅವಿನಾಭಾವ ಸಂಬಂಧ ಇದೆ ಎಂದರು.

ರಾಜಕುಮಾರ್ ಕುಟುಂಬದ ಕುಡಿ ಪುನೀತ್ ಅವರು ಚಿಕ್ಕ ವಯಸ್ಸಿನಿಂದ ಕಲೆಗೆ ಜೀವನ ಮುಡುಪಾಗಿಟ್ಟಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಕುಟುಂಬ ಕಂಗೆಟ್ಟಿದೆ. ಅವರ ಅಗಲಿಕೆಯ ನೋವು ಭರಿಸಲು ಕಷ್ಟ. ಆದರೂ ಪ್ರತಿ ಕಷ್ಟದಲ್ಲೂ ಅಪ್ಪು ಕುಟುಂಬದ ಜೊತೆ ಮಠ ಇರುತ್ತದೆ ಎಂದು ತಿಳಿಸಿದರು.

ಕುಟುಂಬಕ್ಕೆ ಮತ್ತು ಕನ್ನಡ ನಾಡಿಗೆ ಅಪ್ಪು ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಅಂತ ಕೇಳಿಕೊಳ್ತೀವಿ ಎಂದು ಹೇಳಿದ ಅವರು ಕುಟುಂಬಕ್ಕೆ ಆಶೀರ್ವಾದ ನೀಡಿದರು.

ಶ್ರೀಗಳಿಗೆ ಆರೋಗ್ಯ ಸಚಿವ ಸುಧಾಕರ್ ಸಾಥ್ ನೀಡಿದ್ದರು. ಈ ವೇಳೆ ಮಾತನಾಡಿದ ಸಚಿವ ಸುಧಾಕರ್ ಶ್ರೀಗಳು, ಇಂದು ಪುನೀತ್ ನಿವಾಸಕ್ಕೆ ಭೇಟಿ ಆಗಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಪುನೀತ್ ನಿಧನರಾಗಿ ಒಂದು ತಿಂಗಳು ಕಳೆದಿದೆ. ನೈತಿಕ ಸ್ಫೂರ್ತಿ ಮತ್ತು ವಿಶೇಷ ಆಶೀರ್ವಾದ ನೀಡಲು ಇಂದು ಶ್ರೀಗಳು ಬಂದಿದ್ದಾರೆ ಎಂದು ಹೇಳಿದರು.

ಅಶ್ವಿನಿ ಅವರಿಗೆ ವಿಶೇಷ ಆಶೀರ್ವಾದ ನೀಡಿದ್ದಾರೆ. ಶೀಘ್ರದಲ್ಲಿ ದೇವಸ್ಥಾನಕ್ಕೆ ಬಂದು ಪೂಜೆ ಮಾಡಿಸಿ ಅಂತ ಶ್ರೀಗಳು ಅವರ ಕುಟುಂಬಕ್ಕೆ ತಿಳಿಸಿದ್ದಾರೆ. ಶ್ರೀಗಳು ಬಂದಿರೋದು ಅವರ ಕುಟುಂಬಕ್ಕೆ ಸಮಾಧಾನ ತಂದಿದೆ. ಪುನೀತ್ ಕುಟುಂಬದ ಜೊತೆ ಮಠ, ಸ್ವಾಮೀಜಿಗಳು, ಲಕ್ಷಾಂತರ ಭಕ್ತರು ಸದಾ ಇರುತ್ತಾರೆ ಎಂದರು. ಈ ಸಂದರ್ಭದಲ್ಲಿ ರಾಘವೇಂದ್ರ ರಾಜಕುಮಾರ್ ಹಾಜರಿದ್ದರು. 

****

Written By
Kannadapichhar

Leave a Reply

Your email address will not be published. Required fields are marked *