ಆರೋಗ್ಯದಲ್ಲಿ ಏರುಪೇರು ವಿಕ್ರಂ ಆಸ್ಪತ್ರೆಗೆ ದಾಖಲಾದ ಪುನೀತ್ !

ನಟ ಪುನೀತ್ ರಾಜ್ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಮತ್ತು ಇಡೀ ಸ್ಯಾಂಡಲ್ ವುಡ್ ನಲ್ಲಿ ಆತಂಕ ಮೂಡಿಸಿದೆ.
ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಮೇಲ್ನೋಟಕ್ಕೆ ಗಂಭೀರ ಆರೋಗ್ಯ ಸಮಸ್ಯೆಯಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಪುನೀತ್ ಆರೋಗ್ಯದ ಬಗ್ಗೆ ಹಚ್ಚಿನ ಮಾಹಿತಿಗಳು ಇನ್ನಷ್ಟೆ ಹೊರಬರಬೇಕಿದೆ.
ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದು, ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
****