ಶ್ರೀಕೃಷ್ಣ@ಜಿಮೇಲ್ ಡಾಟ್ ಕಾಮ್ ಚಿತ್ರದ ಟ್ರೇಲರ್ ರಿಲೀಸ್..!

ಡಾರ್ಲಿಂಗ್ ಕೃಷ್ಣ ನಾಯಕನಾಗಿ ಕಾಣಿಸಿಕೊಂಡಿರುವ ‘ಶ್ರೀಕೃಷ್ಣ @ಜಿಮೇಲ್ ಡಾಟ್ ಕಾಮ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಈಗಾಗಲೇ ವಿಭಿನ್ನ ಶೀರ್ಷಿಕೆಯ ಮೂಲಕ ಗಮನ ಸೆಳೆದಿರುವ ಈ ಚಿತ್ರದಲ್ಲಿ ಬಹುದೊಡ್ಡ ತಾರಾ ಬಳಗವೇ ಇದೆ. ಅದಕ್ಕೆ ತಕ್ಕಂತೆ, ಟ್ರೈಲರ್ ಕೂಡ ನಿರೀಕ್ಷೆ ಮೂಡಿಸುವಂತಿದ್ದು, ಚಿತ್ರಕ್ಕೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಚಿತ್ರದಲ್ಲಿ ಕೃಷ್ಣ ಅವರಿಗೆ ಭಾವನಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ದತ್ತಣ್ಣ, ಅಚ್ಯುತ್ ಕುಮಾರ್ ಸೇರಿದಂತೆ ಹಲವು ಕಲಾವಿದರು ಮುಖ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.
ನಾಗಶೇಖರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಜಯಣ್ಣ ಕಂಬೈನ್ಸ್ ಹಂಚಿಕೆಯ ಜವಾಬ್ದಾರಿ ಹೊತ್ತಿದೆ. ಅರ್ಜುನ್ ಜನ್ಯಾ ಸಂಗೀತವಿರುವ ಈ ಚಿತ್ರಕ್ಕೆ, ಸತ್ಯ ಹೆಗಡೆ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರವು ಅಕ್ಟೋಬರ್ 15ರಂದು ಬಿಡುಗಡೆಯಾಗಲಿದೆ.
****