News

‘ಜುಗಲ್ ಬಂದಿ’ ಟೈಟಲ್ ಲಾಂಚ್!

‘ಜುಗಲ್ ಬಂದಿ’ ಟೈಟಲ್ ಲಾಂಚ್!
  • PublishedNovember 16, 2021

ಜುಗಲ್ ಬಂದಿ..ಕನ್ನಡದಲ್ಲಿ ಹೀಗೊಂದು ಹೊಸ ಸಿನಿಮಾ ಸದ್ದು ಮಾಡುತ್ತಿದೆ. ಹೊಸಬರೇ ಸೇರಿ ಮಾಡ್ತಿರುವ ಜುಗಲ್ ಬಂದಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಡಿಂಡಿಮ ಪ್ರೊಡಕ್ಷನ್ ಮೂಲಕ ರೆಡಿಯಾಗ್ತಿರುವ ಜುಗಲ್ ಬಂದಿ ಸಿನಿಮಾಕ್ಕೆ ದಿವಾಕರ್ ಡಿಂಡಿಮ ಆಕ್ಷನ್ ಕಟ್ ಹೇಳುತ್ತಿದ್ದಾರೆ.ನಿರ್ದೇಶನದ ಜೊತೆಗೆ ಡಿಂಡಿಮ ಸಿನಿಮಾ ನಿರ್ಮಾಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಫಸ್ಟ್ ಲುಕ್ ಮೂಲಕ ಹೊಸ ನಿರೀಕ್ಷೆ ಹುಟ್ಟಿಸಿರುವ ಜುಗಲ್ ಬಂದಿ ಚಿತ್ರಕ್ಕೆ ಇದೇ 20 ರಂದು ಮುಹೂರ್ತ ಫಿಕ್ಸ್ ಆಗಿದೆ. ನಿನ್ನೆ (ನ 15) ಎ2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಟೈಟಲ್ ಲಾಂಚ್ ಆಗಿದೆ

ಯಶ್ ಶೆಟ್ಟಿ, ಸಂತೋಷ್ ಆಶ್ರಯ್, ಅಶ್ವಿನ್ ರಾವ್ ಪಲ್ಲಕ್ಕಿ, ಅರ್ಚನಾ ಕೊಟ್ಟಿಗೆ, ಮಾನಸಿ ಸುಧೀರ್ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ. ಥ್ರಿಲ್ಲರ್ ಕಥಾಹಂದರ ಹೊಂದಿರುವ ಜುಗಲ್ ಬಂದಿ ಸಿನಿಮಾಕ್ಕೆ ಪ್ರದ್ಯೋತನ್ ಸಂಗೀತ ನಿರ್ದೇಶನ ನೀಡಿದ್ದಾರೆ, ಈ ಹಿಂದೆ ಹಲವು ಸಿನಿಮಾಗಳಿಗೆ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದ ಡಿಂಡಿಮ ‘ಜುಗಲ್ ಬಂದಿ’ ಸಿನಿಮಾ ಮೂಲಕ ನಿರ್ದೇಶನಾಗಿ ಬಡ್ತಿ ಪಡೆದಿದ್ದಾರೆ.

****

Written By
Kannadapichhar

Leave a Reply

Your email address will not be published. Required fields are marked *