ಜೇಮ್ಸ್ ಸಿನಿಮಾದ ಸ್ಯಾಟಲೈಟ್ ರೈಟ್ಸ್ ಗೆ ಭಾರೀ ಮೊತ್ತಕೆ ಮಾರಾಟ..!

ಸ್ಯಾಂಡಲ್ ವುಡ್ ಹೀರೋ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಬಹು ನಿರೀಕ್ಷೆ ಹುಟ್ಟಿಸಿರುವ ಜೇಮ್ಸ್ ಸಿನಿಮಾ ನಿರ್ಮಾಣ ಹಂತದಲ್ಲಿ ಇರುವಾಗಲೆ ಬಾರಿ ಸದ್ದು ಮಾಡುತ್ತಿದೆ. ಚೇತನ್ ಕುಮಾರ್ ನಿರ್ದೇಶನವಿರುವ ಜೇಮ್ಸ್ ಚಿತ್ರದ ಸ್ಯಾಟಲೈಟ್ ಹಕ್ಕುಗಳು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಸ್ಟಾರ್ ಸುವರ್ಣ ವಾಹಿನಿ 15 ಕೋಟಿ ರೂ.ಗಳಿಗೆ ಖರೀದಿಸಿದೆ. ಇದುವರೆಗೆ ಮಾರಾಟವಾದ ಪುನೀತ್ ಅವರ ಚಿತ್ರಗಳಲ್ಲೇ ಇದು ಅತ್ಯಧಿಕ ಮೊತ್ತ ಎನ್ನಲಾಗುತ್ತಿದೆ. ಅಲ್ಲದೆ ಜೇಮ್ಸ್ ಸಿನಿಮಾ ಡಿಜಿಟಲ್ ಮತ್ತು ಹಿಂದಿ ಡಬ್ಬಿಂಗ್ ಹಕ್ಕುಗಳ ಕುರಿತಾಗಿಯೂ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ.
ನಿರ್ಮಾಪಕ ಕಿಶೋರ್ ಪಾತಿಕೊಂಡ ಅವರು ಜೇಮ್ಸ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಂಗೀತ ಟಗರು ಖ್ಯಾತಿಯ ಚರಣ್ ರಾಜ್ ನೀಡಿದ್ದರೆ, ಜೆ. ಸ್ವಾಮಿ ಕ್ಯಾಮೆರಾ ಹಿಡಿದಿದ್ದಾರೆ. ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ತಾರಾಗಣದಲ್ಲಿದ್ದಾರೆ.