‘ಜೈಭೀಮ್’ ಇಂದು (ಅ.2) ಓಟಿಟಿಯಲ್ಲಿ ತೆರೆಗೆ..!

ನಟ ಸೂರ್ಯ ನಿರ್ಮಿಸಿ ಅಭಿನಯಿಸುತ್ತಿರುವ ಜೈಭೀಮ್  ಸಿನಿಮಾ ಅ.2 ಇಂದು ಓಟಿಟಿ ಯಲ್ಲಿ ಬಿಡುಗಡೆ ಆಗುತ್ತಿದೆ. “ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ” ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಟ್ವೀಟ್​ನಲ್ಲಿ ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

****
Exit mobile version