News

ನವೆಂಬರ್ 18 ಚಿತ್ರಮಂದಿರಕ್ಕೆ ಪ್ರೇಕ್ಷಕನನ್ನ ಸೆಳೆಯುತ್ತಿದೆ ‘ಲಕ್ಷ್ಯ’

ನವೆಂಬರ್ 18  ಚಿತ್ರಮಂದಿರಕ್ಕೆ ಪ್ರೇಕ್ಷಕನನ್ನ ಸೆಳೆಯುತ್ತಿದೆ ‘ಲಕ್ಷ್ಯ’
  • PublishedNovember 10, 2021

ನೈಜ ಘಟನೆಗಳನ್ನು ಆಧರಿಸಿ ‌ಒಂದು ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ನಿರ್ಮಾಣವಾಗಿರುವ ಲಕ್ಷ್ಯ ಚಿತ್ರ ಇದೇ ನವೆಂಬರ್ 18 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ರವಿ ಸಾಸನೂರ್ ಅವರು ಕಥೆ ಬರೆದು  ನಿರ್ದೇಶನ ಮಾಡಿರುವ “ಲಕ್ಷ್ಯ” ಚಿತ್ರದ ಟ್ರೈಲರನ್ನು ಗೂಗ್ಲಿ ಖ್ಯಾತಿಯ ನಿರ್ದೇಶಕ ಪವನ್ ಒಡೆಯರ್ ಕುಮಾರ್ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರವಿ ಸಾಸನೂರ್ ಅವರು 18 ವರ್ಷದ ನಂತರ ಪ್ರತಿಯೊಬ್ಬರ ಜೀವನದಲ್ಲೂ ನಡೆಯುವಂಥ ಘಟನೆಗಳೇ ಈ ಚಿತ್ರದಲ್ಲಿದ್ದು ಎಲ್ಲರಿಗೂ ಚಿತ್ರ ಕನೆಕ್ಟ್ ಆಗುತ್ತದೆ. ಚಿತ್ರದಲ್ಲಿ ಗೋಕಾಕ್ ಫಾಲ್ಸ್ ನ್ನು ವಿಭಿನ್ನವಾಗಿ ತೋರಿಸಿದ್ದೇವೆ. ಬೆಳಗಾವಿ, ಸಾಂಗ್ಲಿ, ಗೋಕಾಕ್ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ, ಕರೆಪ್ಷನ್ ಇಶ್ಯೂ ಇಟ್ಟುಕೊಂಡು ಮಾಡಿದಂಥ ಕಮರ್ಷಿಯಲ್ ಚಿತ್ರವಿದು ಎಂದು ಹೇಳಿದರು.ಬಹುತೇಕ ಉತ್ತರ ಕರ್ನಾಟಕದವರೇ ಸೇರಿ ನಿರ್ಮಿಸಿರುವ ‘ಲಕ್ಷ್ಯ’ ಚಿತ್ರ ಮುಂದಿನವಾರ ಚಿತ್ರಮಂದಿರಕ್ಕೆ ಬರುತ್ತಿದ್ದು ಪ್ರೇಕ್ಷಕನ ಲಕ್ಷ್ಯವನ್ನ ತನ್ನತ್ತ ಹೇಗೆ ಸೆಳೆಯುತ್ತೆ ಎಂಬುದನ್ನ ಕಾದುನೋಡನೇಕಿದೆ.

****

Written By
Kannadapichhar

Leave a Reply

Your email address will not be published. Required fields are marked *