ನೂತನ ಸಿಎಂ ಗೆ ‘ಕಿಚ್ಚ‘ನಿಂದ ಶುಭಾಶಯ


ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.
ನೂತನ ಸಿಎಂ ಬೊಮ್ಮಾಯಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ರಾಜಕೀಯ ಗಣ್ಯರು ಮಾತ್ರವಲ್ಲದೇ ಸಿನಿಮಾರಂಗದ ಗಣ್ಯರು ವಿಶ್ ಮಾಡುತ್ತಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಹ ನೂತನ ಸಿಎಂ ಬೊಮ್ಮಾಯಿಗೆ ಅಭಿನಂದನೆ ತಿಳಿಸಿದ್ದಾರೆ.

ತನ್ನ ವೃತ್ತಿ ಜೀವನದ ಆರಂಭದ ದಿನಗಳಲ್ಲಿ ವೈಯಕ್ತಿಕವಾಗಿ ತುಂಬಾ ದೊಡ್ಡ ಬೆಂಬಲ ನೀಡಿದ್ದರು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, “ಸರಳತೆಯನ್ನು ನೋಡಿ ಬೆಳೆದವನು ನಾನು. ನನ್ನ ವೃತ್ತಿಜೀವನದ ಆರಂಭಿಕ ದಿನಗಳಲ್ಲಿ ಅವರು ನನಗೆ ವೈಯಕ್ತಿಕವಾಗಿ ನನಗೆ ದೊಡ್ಡ ಬೆಂಬಲ ನೀಡಿದ್ದಾರೆ. ನಿಮಗೆ ಒಳ್ಳೆಯದಾಗಲಿ ಮಮಾ” ಎಂದು ಹೇಳಿದ್ದಾರೆ.