News

ಪುನೀತ್ ಅಗಲಿಕೆ ನಾನು ಕನಸ್ಸಿನಲ್ಲಿಯೂ ಎಣಿಸಿರಲಿಲ್ಲ: ಹೆಚ್.ಡಿ.ಕೆ

ಪುನೀತ್ ಅಗಲಿಕೆ ನಾನು ಕನಸ್ಸಿನಲ್ಲಿಯೂ ಎಣಿಸಿರಲಿಲ್ಲ: ಹೆಚ್.ಡಿ.ಕೆ
  • PublishedOctober 29, 2021

ಹೃದಯಾಘಾತದಿಂದ ಬಾರದಕಲೋಕಕ್ಕೆ ತೆರಳಿದ ನಟ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅಗಲಿಕೆಗೆ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಈ ಟ್ಬೀಟ್​ ಮಾಡಿರುವ ಅವರು, “ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ವೈಯಕ್ತಿಕವಾಗಿ ನನಗೆ ಆಗಿರುವ ಆಘಾತ ಅಷ್ಟಿಷ್ಟಲ್ಲ. ಇಂತಹ ಸುದ್ದಿ ಕೇಳಬೇಕಾಗುತ್ತದೆ ಎಂದು ಕನಸು ಮನಸಿನಲ್ಲೂ ಎಣಿಸಿರಲಿಲ್ಲ.

ಅಣ್ಣಾವ್ರ ಪುತ್ರರಾದರೂ ತಮ್ಮದೇ ವಿಭಿನ್ನ ನಟನಾ ಪ್ರತಿಭೆ ಹೊಂದಿದ್ದ ಪುನೀತ್ ಅವರು; ಬಾಲ ನಟರಾಗಿಯೇ ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟವರು. ಆಮೇಲೆ ಹೀರೋ ಆಗಿ ಪ್ರತೀ ಕನ್ನಡಿಗನ ಮನೆಮನ ರಂಜಿಸಿದ್ದರು. ಗಾಯಕರಾಗಿ, ನಿರ್ಮಾಪಕರಾಗಿ ಚಿತ್ರರಂಗದ ಕಣ್ಮಣಿ ಆಗಿದ್ದವರು. ಪುನೀತ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ, ಕನ್ನಡಕ್ಕೆ, ನಾಡು ನುಡಿಗೆ ಭರಿಸಲಾಗದ ನಷ್ಟ. ಅವರ ನಿಧನ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ನಮೆಲ್ಲರ ಅಪ್ಪು ಇನ್ನಿಲ್ಲ ಎನ್ನುವ ಸ್ಥಿತಿಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಅಂತಾ ಟ್ವೀಟ್​ ಮಾಡಿ ಕಂಬನಿಮಿಡಿದಿದ್ದಾರೆ.

****

Written By
Kannadapichhar

Leave a Reply

Your email address will not be published. Required fields are marked *