News

ಪುನೀತ್ ಬಗ್ಗೆ ಕೆಟ್ಟ ಪೋಸ್ಟ್ ಮಾಡಿದ್ದ ಕಿಡಿಗೇಡಿಯ ಬಂಧನ!

ಪುನೀತ್ ಬಗ್ಗೆ ಕೆಟ್ಟ ಪೋಸ್ಟ್ ಮಾಡಿದ್ದ ಕಿಡಿಗೇಡಿಯ ಬಂಧನ!
  • PublishedNovember 2, 2021

ಪುನೀತ್ ರಾಜ್‌ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಬೆಂಗಳೂರು ಸಿಟಿ ಪೊಲೀಸ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ಹಠಾತ್ ನಿಧನದ ಬಳಿಕ ಯಾವುದೇ ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರ ವಹಿಸಲಾಗಿತ್ತು. ಮದ್ಯದಂಗಡಿ, ಬಾರ್‌ಗಳನ್ನು ಬಂದ್ ಮಾಡಿಸಲಾಗಿತ್ತು. ಮದ್ಯ ಮರಾಟಕ್ಕೆ ನಿಷೇಧ ಹೇರಲಾಗಿತ್ತು. ಮದ್ಯ ಸಿಗದೆ ಬೇಸೆತ್ತ ಉತ್ತರ ಭಾರತದ ವ್ಯಕ್ತಿಯೊಬ್ಬ ಪುನೀತ್ ರಾಜ್‌ಕುಮಾರ್‌ಗೆ ಅಗೌರವ ತೋರಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ. ಬಿಯರ್ ಬಾಟಲಿಯ ಚಿತ್ರ ಹಂಚಿಕೊಂಡು ಪುನೀತ್ ರಾಜ್‌ಕುಮಾರ್ ಬಗ್ಗೆ ಅವಹೇಳನ ಮಾಡಿದ್ದ.

ಇದನ್ನ ಗಮನಿಸಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ‘’ಕೇವಲ ಮದ್ಯಕ್ಕಾಗಿ ಇಂತಹ ವರ್ತನೆಯೇ? ಜನರಲ್ಲಿ ಮನುಷ್ಯತ್ವ ಅನ್ನೋದು ಉಳಿದಿಲ್ಲವೇ?’’ ಎಂದು ಸಾಮಾಜಿಕ ಜಾಲತಾಣದಲ್ಲಿ ಸಾನ್ವಿ ಸುದೀಪ್ ತಮ್ಮ ಬೇಸರ ಹೊರ ಹಾಕಿದ್ದರು. ಇದನ್ನ ಕಂಡ ಸೈಬರ್ ಕ್ರೈಂ ಮತ್ತು ಬೆಂಗಳೂರು ಸಿಟಿ ಪೊಲೀಸರು ಈಗ ಆ ಕಿಡಿಗೇಡಿಯನ್ನ ಬಂಧಿಸಿದ್ದಾರೆ.

****

Written By
Kannadapichhar

Leave a Reply

Your email address will not be published. Required fields are marked *