News

ಪುನೀತ್ ರಾಜಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ “ಖುಷ್ಬೂ”

ಪುನೀತ್ ರಾಜಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ “ಖುಷ್ಬೂ”
  • PublishedNovember 9, 2021

ಇಂದು (ನವೆಂಬರ್​ 9) ಖುಷ್ಬೂ ಬೆಂಗಳೂರಿನಲ್ಲಿರುವ ಪುನೀತ್​ ರಾಜ್​ಕುಮಾರ್​ ಮನೆಗೆ ಆಗಮಿಸಿದ್ದರು. ಈ ವೇಳೆ ಅಪ್ಪು ಪತ್ನಿ ಅಶ್ವಿನಿ ಪುನೀತ್​ ರಾಜ್​​ಕುಮಾರ್​ಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಿವರಾಜ್​ಕುಮಾರ್​ ಕೂಡ ಇದ್ದರು.

ಖುಷ್ಬೂ ಅವರು ಸಂಜೆ ವೇಳೆಗೆ ಪುನೀತ್​ ನಿವಾಸಕ್ಕೆ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ನೇರವಾಗಿ ಅವರು ಸದಾಶಿವ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಅಶ್ವಿನಿ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ ಅವರು. ಇದರ ಜತೆಗೆ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಮೊದಲು ಸಾಕಷ್ಟು ಪರಭಾಷೆಯ ನಟರು ಶಿವಣ್ಣ, ಪುನೀತ್​ ಮನೆಗೆ ಬಂದು  ಸಾಂತ್ವನ ಹೇಳುವ ಕೆಲಸ ಮಾಡಿದ್ದರು.

****

Written By
Kannadapichhar

Leave a Reply

Your email address will not be published. Required fields are marked *