News

ಮುಹೂರ್ತ ನೆರವೇರಿಸಿದ ‘ಲವ್ ಮಿ or ಹೇಟ್ ಮಿ’ ಚಿತ್ರ.

ಮುಹೂರ್ತ ನೆರವೇರಿಸಿದ ‘ಲವ್ ಮಿ or ಹೇಟ್ ಮಿ’ ಚಿತ್ರ.
  • PublishedSeptember 11, 2021

ಡಾರ್ಲಿಂಗ್ ಕೃಷ್ಣ ಮತ್ತು ರಚಿತ ರಾಮ್ ಅಭಿನಯದ “ಲವ್ ಮಿ or ಹೇಟ್ ಮಿ” ಚಿತ್ರದ ಮುಹೂರ್ತ ನೆರವೇರಿದೆ. ಬೆಂಗಳೂರಿನ ದೇವಾಲಯವೊಂದರಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ಮೊದಲ ಸನ್ನಿವೇಶಕ್ಕೆ ಮಿಲನ ನಾಗರಾಜ್ ಆರಂಭ ಫಲಕ ತೋರಿದ್ದು,  ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು.  


“ಲವ್ ಮಿ or ಹೇಟ್ ಮಿ” ಚಿತ್ರ ಕ್ಕೆ ಕ್ಲಾಪ್ ಮಾಡಿದ ಮಿಲನ ನಾಗರಾಜ್

ತೂಗುದೀಪ ಸಂಸ್ಥೆಯ ಕೆಲವು ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದ, ದೀಪಕ್ ಗಂಗಾಧರ್ ದೀಪಕ್ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ.  ಆ ನಂತರ ವಿತರಕರಾಗಿಯೂ ಹೆಸರು ಮಾಡಿದ್ದಾರೆ. ಗೌರಿ ಹಬ್ಬದ ಶುಭದಿನದಂದು ಚಿತ್ರ ಆರಂಭಿಸಿದ್ದೇವೆ. ಇದೇ ಹದಿಮೂರರಿಂದ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ.‌ ಇದೊಂದು ಪಕ್ಕಾ ಲವ್ ಸ್ಟೋರಿ. ನಿಮ್ಮೆಲ್ಲರ ಬೆಂಬಲ ನಮಗಿರಲಿ ಎನ್ನುತ್ತಾರೆ ದೀಪಕ್ ಗಂಗಾಧರ್.

 ಒಳ್ಳೆಯ ಕಥೆ.‌ ಈ ಚಿತ್ರದಲ್ಲಿ ನನ್ನದು ಎರಡು ರೀತಿಯ ಪಾತ್ರ.  ಕಾಲೇಜ್ ಹುಡುಗನಾಗಿ ಹಾಗೂ ಕಾಲೇಜ್ ನಂತರದ ದಿನಗಳದ್ದು. ಲವ್ ಸಬ್ಜೆಕ್ಟ್ ನನಗೆ ಇಷ್ಟ ಹಾಗಾಗಿ ಹೆಚ್ಚಾಗಿ ಅದನೇ ಆಯ್ಕೆ ಮಾಡಿಕೊಳ್ಳುತ್ತೇನೆ. ನಾನು ಮತ್ತು ರಚಿತಾ ರಾಮ್ ಮೊದಲ ಬಾರಿಗೆ ಒಟ್ಟಾಗಿ ನಟಿಸುತ್ತಿದ್ದೇವೆ. ನಾವಿಬ್ಬರು ಒಂದೇ ದಿನ ಚಿತ್ರರಂಗ ಪ್ರವೇಶಿಸಿದವರು. ಎಂಟು ವರ್ಷಗಳ ಹಿಂದೆ ನನ್ನ ಮದರಂಗಿ, ರಚಿತಾ ಅವರ ಬುಲ್ ಬುಲ್ ಒಂದೇ ದಿನ ತೆರೆ ಕಂಡಿತ್ತು. ಇಷ್ಟು ವರ್ಷಗಳ ನಂತರ ಒಂದೇ ಚಿತ್ರದಲ್ಲಿ ಅಭಿನಯಿಸುವ ಅವಕಾಶ ಕೂಡಿ ಬಂದಿದೆ ಎಂದು ಡಾರ್ಲಿಂಗ್ ಕೃಷ್ಣ ಹೇಳಿದರು.

****

Written By
Kannadapichhar

Leave a Reply

Your email address will not be published. Required fields are marked *