News

ರಂಜಿನಿ ರಾಘವನ್ ಅವರ ‘ಕತೆ ಡಬ್ಬಿ’ ಪುಸ್ತಕ ಬಿಡುಗಡೆ

ರಂಜಿನಿ ರಾಘವನ್ ಅವರ ‘ಕತೆ ಡಬ್ಬಿ’ ಪುಸ್ತಕ ಬಿಡುಗಡೆ
  • PublishedSeptember 30, 2021

ಪುಸ್ತಕ ಬರೆಯುವ ಕನಸೊಂದು ನನ್ನ ಮನಸಿನ ಮೂಲೆಯಲ್ಲಿ ಕುಳಿತಿದ್ದು, ಕತೆ ಡಬ್ಬಿ ಮೂಲಕ ಇದು ಸಾಕಾರಗೊಂಡಿದೆ. ಮೊದಲ ಪುಸ್ತಕವಾಗಿದ್ದರಿಂದ ತುಂಬಾ ಸಂಭ್ರಮದಲ್ಲಿದ್ದೇನೆ ಎಂದು ಎಂದು ಕನ್ನಡತಿ ಖ್ಯಾತಿಯ ನಟಿ ರಂಜನಿ ರಾಘವನ್‌ ತಿಳಿಸಿದರು.

ಬೆಂಗಳೂರಿನಲ್ಲಿ ಬಹುರೂಪಿ ಹಮ್ಮಿಕೊಂಡಿದ್ದ ʻಕತೆ ಡಬ್ಬಿʼ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಅವಧಿ ವೆಬ್‌ ಪತ್ರಿಕೆಯಲ್ಲಿ ವಾರಕ್ಕೊಮ್ಮೆ ಕತೆಗಳನ್ನು ಬರೆಯುತಿದ್ದು, ಅದಕ್ಕೆ ಬಂದ ಪ್ರತಿಕ್ರಿಯೆಗಳು ಉತ್ಸಾಹ ತುಂಬಿತು ಅದೇ ಕಾರಣವಾಗಿ ಕತೆ ಡಬ್ಬಿ ರೂಪುಗೊಂಡಿತು ಎಂದು ತಿಳಿಸಿದರು. ಹಾಗೆ ಮುಂದೆ ಕಾದಂಬರಿಯನ್ನು ಬರೆಯುವ ಹಸಿವು ಇದ್ದು, ಬರವಣಿಗೆಯ ಲೋಕದಲ್ಲಿ ದಿಗ್ಗಜರ ನಡುವೆ ಪುಟ್ಟಗೌರಿಯ ಕಥಾ ಸಂಕಲನಕ್ಕೆ ಸೊಗಸಾದ ಸ್ವಾಗತ ಸಿಕ್ಕಿದ್ದು ಸಂತಸ ತಂದಿದೆ ಎಂದು ತಿಳಿಸಿದರು.ಇನ್ನು ಈ ಸಂದರ್ಭದಲ್ಲಿ ಚಿತ್ರ ನಟರಾದ ರಿಷಿ, ಬಹುರೂಪಿಯ ಜಿ ಎನ್‌ ಮೋಹನ್‌, ಬಹುರೂಪಿ ಬುಕ್‌ ಹಬ್‌ ನಿರ್ದೇಶಕರಾದ ಶ್ರೀಜಾ ವಿ ಎನ್, ಧೀರಜ್‌ ಹನುಮೇಶ್ ಉಪಸ್ಥಿತರಿದ್ದರು.

****

Written By
Kannadapichhar

Leave a Reply

Your email address will not be published. Required fields are marked *