ರಾಣ ಫಸ್ಟ್ ಲುಕ್ ಟೀಸರ್ ರಿಲೀಸ್..

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ನಾಯಕ ನಟನಾಗಿ ಅಭಿನಯಿಸುತ್ತಿರುವ ಮೊದಲ ಚಿತ್ರದ ‘ರಾಣಾ’ದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ಸ್ಯಾಂಡಲ್ ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ.

ಫಸ್ಟ್ ಲುಕ್ ಟೀಸರ್ ನಲ್ಲಿ ನಾಯಕ ನಟ ಶ್ರೇಯಸ್ ಮಂಜು ಸಕತ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ, ಜೊತೆಗೆ ಕೈಯಲ್ಲಿ ಲಾಂಗ್ ಹಿಡಿದು ವಿಲನ್ ಗಳನ್ನು ಅಟ್ಯಾಕ್ ಮಾಡುತ್ತಿಡುವ ಟೀಸರ್ ಸಕತ್ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಇತ್ತೀಚೆಗೆ ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಶ್ರೇಯಸ್ ಅವರಿಗೆ ಲಾಂಗ್ ಹಿಡಿಯುವ ಹೊಸ ಹೊಸ ಸ್ಟೈಲ್ ಗಳನ್ನು ಹೇಳಿಕೊಡುತ್ತಿದ್ದ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ಸಕತ್ ವೈರಲ್ ಆಗಿತ್ತು.

ನಿರ್ಮಾಪಕ ಪುರುಷೋತ್ತಮ ಗುಜ್ಜಾಲ್, ನಿರ್ದೇಶಕ ನಂದ ಕಿಶೋರ್, ನಾಯಕ ಶ್ರೇಯಸ್ ಹಾಗೂ ನಾಯಕಿ ರೀಷ್ಮಾ ನಾಣಯ್ಯ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನೀಡುತ್ತಿದ್ದು, ಶೇಖರ್‌ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಮಾಡುತ್ತಿದ್ದು. ಸಂಭಾಷಣೆ ಪ್ರಶಾಂತ್ ರಾಜಪ್ಪ ಬರೆಯುತ್ತಿದ್ದಾರೆ.
****