‘ರೈಡರ್’ ಚಿತ್ರ ಡಿಸೆಂಬರ್ 24ಕ್ಕೆ ತೆರೆಗೆ!

ಕನ್ನಡ ಚಿತ್ರರಂಗದ ಯುವರಾಜ, ರಾಜಕಾರಣಿ ನಿಖಿಲ್‌ ಕುಮಾರ್‌ ಅಭಿನಯದ ಬಹು ನಿರೀಕ್ಷಿತ ವಿಜಯ್‌ ಕುಮಾರ್‌ ಕೊಂಡ ನಿರ್ದೇಶನದ ‘ರೈಡರ್‌’  ಚಿತ್ರ ಡಿಸೆಂಬರ್ 24 ರಂದು ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನವೆ ಚಿತ್ರದ ಹಾಡು ಮತ್ತು ಟೀಸರ್‌ ಸಕತ್ ಸೌಂಡ್ ಮಾಡಿದ್ದವು. ನಟ ನಿಖಿಲ್‌ ಕುಮಾರ್‌ ಆಪ್ತ ಸುನೀಲ್‌ ಗೌಡ ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಲಹರಿ ಫಿಲಮ್ಸ್‌ ಕೂಡ ನಿರ್ಮಾಣದಲ್ಲಿ ಪಾಲುದಾರಿಕೆ ಹಂಚಿಕೊಂಡಿದೆ.

ಸೀತಾರಾಮ ಕಲ್ಯಾಣ’  ಚಿತ್ರದ ಮೂಲಕ ಲವರ್ ಬಾಯ್​ ಆಗಿ ಸ್ಯಾಂಡಲ್​ವುಡ್​ ಪ್ರೇಕ್ಷಕರನ್ನು ರಂಜಿಸಿದ್ದ ನಿಖಿಲ್ ಕುಮಾರಸ್ವಾಮಿ ‘ರೈಡರ್’ ಚಿತ್ರದಲ್ಲಿ ಬಾಸ್ಕೆಟ್ ಬಾಲ್ ಪ್ಲೇಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ನಿಖಿಲ್‌ಗೆ ನಾಯಕಿಯಾಗಿ ಯುವ ನಟಿ ಕಾಶ್ಮೀರಿ ಪರ್ದೇಸಿ ನಟಿಸಿದ್ದು, ಮತ್ತೊಬ್ಬ ನಾಯಕಿಯಾಗಿ ಅನುಷಾ ರೈ ಅಭಿನಯಿಸಿದ್ದಾರೆ.

ಇನ್ನು ಚಿತ್ರದಲ್ಲಿ ದತ್ತಣ್ಣ, ಗರುಡ ರಾಮ್, ಚಿಕ್ಕಣ್ಣ, ಶೋಭರಾಜ್, ರಾಜೇಶ್ ನಟರಂಗ, ಶಿವರಾಜ್.ಕೆ.ಆರ್.ಪೇಟೆ, ಬಿಗ್​ ಬಾಸ್​ ವಿನ್ನರ್​ ಮಂಜು ಪಾವಗಡ, ಸಂಪದ ಹುಲಿವಾನ, ನಿಹಾರಿಕ ಸೇರಿದಂತೆ ದೊಡ್ಡ ತಾರಬಳಗ ಚಿತ್ರದಲ್ಲಿದೆ. ಡಿಸೆಂಬರ್ ನಲ್ಲಿ ಸಾಲು ಸಾಲು ಚಿತ್ರಗಳು ಬಿಡುಗಡೆ ಆಗಲಿದ್ದು ನಿಖಿಲ್ ಅಭಿನಯದ ರೈಡರ್ ಚಿತ್ರ ಡಿಸೆಂಬರ್ 24 ಕ್ಕೆ ರಿಲೀಸ್ ಆಗ್ತಿದ್ರೆ. ಅದೇ ದಿನ ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರ ರಿಲೀಸ್ ಆಗ್ತಿದೆ.

****

Exit mobile version