ಹಿರಿಯ ನಟ ರಾಜೇಶ್ ಅವರ ಪತ್ನಿ ಪಾರ್ವತಮ್ಮ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪಾರ್ವತಮ್ಮ ಅವರು ಪತಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ರಾಜೇಶ್ ದಂಪತಿಯ ಪುತ್ರಿ ನಿವೇದಿತಾ, ನಟ ಅರ್ಜುನ್ ಸರ್ಜಾ ಅವರನ್ನು ವಿವಾಹವಾಗಿದ್ದಾರೆ.
****