ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ಮಾಡಿದ್ದು, ಪುನೀತ್ ರಾಜ್‌ಕುಮಾರ್ ನಿಧನಾ ನಂತರ ಅಂತ್ಯಸಂಸ್ಕಾರ ಕಾರ್ಯವೆಲ್ಲ ನೆರವೇರಿದ ಬಳಿಕ ಸ್ವಲ್ಪ ತಡವಾಗಿ ಪಟ್ಟಿ ಪ್ರಕಟವಾಗಿದೆ.
ನವೆಂಬರ್ 1ರ ರಾಜ್ಯೋತ್ಸವಕ್ಕೂ ಮುನ್ನ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. 66 ಮಂದಿಯ ಹೆಸರು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿದ್ದು ನಟ ದೇವರಾಜ್, ಟೆನ್ನಿಸ್ ಆಟಗಾರ ಬೋಪ್ಪಣ್ಣ ಹೆಸರು ಕೂಡ ಈ ಪಟ್ಟಿಯಲ್ಲಿದೆ. ಇದರೊಂದಿಗೆ ಈ ವರ್ಷ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅದರ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಆದರೆ ಇದು ಈ ವರ್ಷಕ್ಕೆ ಮಾತ್ರ ಸೀಮಿತವಾಗಿರಲಿದೆ ಎಂದು ತಿಳಿಸಲಾಗಿದೆ.
****