News

ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ಗಂಭಿರ ಬೌರಿಂಗ್ ಆಸ್ಪತ್ರೆಗೆ ದಾಖಲು..!

ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ಗಂಭಿರ ಬೌರಿಂಗ್ ಆಸ್ಪತ್ರೆಗೆ ದಾಖಲು..!
  • PublishedOctober 4, 2021

ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ಧಿಡೀರ್ ವ್ಯತ್ಯಾಸವಾಗಿದ್ದು ಅವರನ್ನು ಬೌರಿಂಗ್ ನ ಐಸಿಯು ವಾರ್ಡ್ ಗೆ ದಾಖಲು ಮಾಡಲಾಗಿದೆ ನಟ ಸತ್ಯಜಿತ್​ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಈಗ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

ಸತ್ಯಜಿತ್​ ಪುತ್ರ ಹೇಳಿರುವ ಪ್ರಕಾರ ಪ್ರಸ್ತುತ ಅವರ ಪರಿಸ್ಥಿತಿ ಗಂಭೀರವಾಗಿದೆ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಲೇ ಇದೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಹಲವು ದಿನಗಳಿಂದ ಸತ್ಯಜಿತ್​ಗೆ ಆರೋಗ್ಯ ಕೈಕೊಟ್ಟಿದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಕೂಡ ಎದುರಾಗಿದೆ.​ ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಅವರು ಬಹು ಬೇಡಿಕೆಯ ಫೋಷಕ ನಟನಾಗಿದ್ದರು. ನೂರಾರು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಗಮನ ಸೆಳೆಯುತ್ತಿದ್ದ ಸತ್ಯಜಿತ್​ ಅವರಿಗೆ ಗ್ಯಾಂಗ್ರಿನ್​ ಕಾಣಿಸಿಕೊಂಡ ಬಳಿಕ ಬೇಡಿಕೆ ಕಡಿಮೆ ಆಯಿತು. 2018ರಲ್ಲಿ ತೆರೆಕಂಡ ಪ್ರಿಯಾಂಕಾ ಉಪೇಂದ್ರ ನಟನೆ ‘ಸೆಕೆಂಡ್​ ಹಾಫ್​’ ಚಿತ್ರದ ಬಳಿಕ ಬೇರೆ ಯಾವುದೇ ಸಿನಿಮಾದಲ್ಲಿ ಸತ್ಯಜಿತ್​ ಕಾಣಿಸಿಕೊಂಡಿಲ್ಲ.

****

Written By
Kannadapichhar

Leave a Reply

Your email address will not be published. Required fields are marked *