ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಾಣುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಸಾರ್ವಜನಿಕ ಕ್ರೀಡಾ ಚಟುವಟಿಕೆಗಳು ಹಾಗೂ ಥಿಯೇಟರ್ ಗಳಿಲ್ಲಿ ಹೆಚ್ಚುವರಿ ಪ್ರೇಕ್ಷಕರಿಗೆ ಅನುಮತಿ ಸೂಚಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಥಿಯೇಟರ್ ನಲ್ಲಿ ಶೇ.100 ರಷ್ಟು ಪ್ರೇಕ್ಷಕರಿಂದ ಚಿತ್ರ ವೀಕ್ಷಣೆಗೆ, ಅನುಮತಿ ನೀಡಲು ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಗೆ ಸ್ವಾತಂತ್ರ್ಯವನ್ನು ನೀಡಿದೆ.
ಈಗಾಗಲೇ ತಮಿಳುನಾಡು ಹಾಗೂ ಆಂಧ್ರಪ್ರದೇಶ ಸರಕಾರಗಳು ಶೇಕಡಾ 100ರಷ್ಟು ಪ್ರೇಕ್ಷಕರಿಂದ ಥಿಯೇಟರ್ ನಲ್ಲಿ ಸಿನಿಮಾ ವೀಕ್ಷಣೆಗೆ ಅನುಮತಿ ನೀಡುವ ಪ್ರಯತ್ನ ಮಾಡಿದ್ದವು.ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಆದಷ್ಟು ಬೇಗ ಹೌಸ್ ಫುಲ್ ಥಿಯೇಟರ್ ಗೆ ಅನುಮತಿ ಸಿಗಲಿದೆ. ಈ ಕುರಿತು ರಾಜ್ಯ ಸರ್ಕಾರ ಶೀಘ್ರವೇ ಆದೇಶ ಹೊರಡಿಸಲಿದೆ.