25.6 C
Bengaluru
Thursday, December 8, 2022
spot_img

‘ಲವ್ ಯೂ ರಚ್ಚು’ ಚಿತ್ರೀಕರಣ ವೇಳೆ ಫೈಟರ್ ವಿವೇಕ್ ಸಾವು: ಮೂವರಿಗೆ ನ್ಯಾಯಾಂಗ ಬಂಧನ

 ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯದ ‘ಲವ್  ಯೂ ರಚ್ಚು’ ಸಿನಿಮಾದ ಶೂಟಿಂಗ್‌ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ ಪರಿಣಾಮ ವಿವೇಕ್ ಎಂಬ ಫೈಟರ್ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚಿತ್ರದ ನಿರ್ದೇಶಕ ಶಂಕರ್, ಫೈಟ್ ಮಾಸ್ಟರ್ ವಿನೋದ್ ಮತ್ತು ಕ್ರೇನ್ ಆಪರೇಟರ್ ಮಹಾದೇವ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

‘ಲವ್ ಯೂ ರಚ್ಚು’ ಚಿತ್ರೀಕರಣ ವೇಳೆ ಫೈಟರ್ ವಿವೇಕ್ ಸಾವು: ಮೂವರಿಗೆ ನ್ಯಾಯಾಂಗ ಬಂಧನ

ಘಟನೆಯ ವಿವರ:

ಬಿಡದಿ ಬಳಿಯ ಜೋಗನಪಾಳ್ಯ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ವಿದ್ಯುತ್ ಅವಘಡ ಸಂಭವಿಸಿದ ಪರಿಣಾಮ ಫೈಟರ್ ಮೃತಪಟ್ಟರು. ಇನ್ನೂ ಮತ್ತೊಬ್ಬ ಸಾಹಸ ಕಲಾವಿದ ರಂಜಿತ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿರ್ದೇಶಕ ಶಂಕರಯ್ಯ ಎ1, ನಿರ್ಮಾಪಕ ಗುರು ದೇಶಪಾಂಡೆ ಎ2, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಮತ್ತು ಕ್ರೇನ್ ಆಪರೇಟರ್ ಮಹದೇವ್ ಎ5 ಆರೋಪಿಗಳೆಂದು ದಾಖಲಾಗಿದೆ. ನಿನ್ನೆ ಘಟನೆ ನಡೆದ ಬಳಿಕ ಬಿಡದಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಘಟನೆ ನಡೆದ ಬಳಿಕ ಚಿತ್ರದ ನಿರ್ಮಾಪಕ ಹಾಗೂ ಸ್ಯಾಂಡಲ್ ವುಡ್ ನಿರ್ದೇಶಕ ಗುರು ದೇಶಪಾಂಡೆ ಎಸ್ಕೇಪ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳಲ್ಲಿ ವರದಿ ಬರುತ್ತಿದ್ದಂತೆ ನಾನು ನನ್ನ ಕೆಲಸ ನಿಮಿತ್ತ ಬೇರೆ ಊರಿಗೆ ಹೋಗಿದ್ದೆ, ಇಂದು ಮಧ್ಯಾಹ್ನ ಹೋಗುತ್ತೇನೆ, ಬಿಡದಿ ಪೊಲೀಸರು ಕರೆದರೆ ವಿಚಾರಣೆಗೆ ಹೋಗುತ್ತೇನೆ ಎಂದು ನಿನ್ನೆ ಹೇಳಿದ್ದ ಗುರು ದೇಶಪಾಂಡೆ ಇಂದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ ಗಾಯಾಳುವಾಗಿರುವ ರಂಜಿತ್ ಎನ್ನುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿವೇಕ್ ಮೃತದೇಹ ಮರಣೋತ್ತರ ಪರೀಕ್ಷೆಯಾಗಿ  ಕುಟುಂಬಕ್ಕೆ ದೇಹ ಹಸ್ತಾಂತರ ಮಾಡಲಾಗಿದೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles