29.4 C
Bengaluru
Sunday, February 5, 2023
spot_img

ಮೃತ ಫೈಟರ್ ವಿವೇಕ್ಗೆ 10 ಲಕ್ಷ ಪರಿಹಾರ..!

ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ಮತ್ತು ಡಿಂಪಲ್ ಕ್ವೀನ್ ರಚಿತ ರಾಮ್ ಅಭಿನಯದ ‘ಲವ್ ಯ್ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಸಂಭವಿಸಿದ ವಿದ್ಯುತ್ ಅವಘಡದಿಂದಾಗಿ ಫೈಟರ್ ವಿವೇಕ್ ಮೃತಪಟ್ಟಿದ್ದಾರೆ. ಇದೇ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಂಜಿತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣದ ಸಂಬಂಧ ನಿರ್ದೇಶಕ ಶಂಕರ್, ಸಾಹಸ ನಿರ್ದೇಶಕ ವಿನೋದ್ ಹಾಗೂ ಕ್ರೇನ್ ಆಪರೇಟರ್ ಮಹಾದೇವ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


ಮೃತ ಫೈಟರ್ ವಿವೇಕ್ ಅವರ ತಾಯಿಯ ಹೆಸರಿಗೆ ಬರೆದ 5 ಲಕ್ಷದ ಚೆಕ್ ಅನ್ನು ಪ್ರದರ್ಶಿಸುತ್ತಿರುವ ಗುರು ದೇಶಪಾಂಡೆ ಪತ್ನಿ ಪ್ರೀತಿಕಾ

ಈ ದುರ್ಘಟನೆಗೆ ಸಂಬಂಧಿಸಿದಂತೆ ನಿರ್ಮಾಪಕ ಗುರು ದೇಶಪಾಂಡೆ ಪತ್ನಿ ಪ್ರೀತಿಕಾ ಪತ್ರಿಕಾಗೋಷ್ಠಿ ನಡೆಸಿದರು. ಮೃತ ವಿವೇಕ್ ಕುಟುಂಬಕ್ಕೆ 10 ಲಕ್ಷ ರೂಪಾಯಿ ಕೊಡುವುದಾಗಿ ಗುರು ದೇಶಪಾಂಡೆ ಪತ್ನಿ ಪ್ರೀತಿಕಾ ತಿಳಿಸಿದ್ದಾರೆ. ಸದ್ಯ ವಿವೇಕ್ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೀಡುತ್ತೇವೆ. ಗುರು ದೇಶಪಾಂಡೆಗೆ ಜಾಮೀನು ದೊರೆತ ಬಳಿಕ ಇನ್ನೈದು ಲಕ್ಷ ರೂಪಾಯಿ ಕೊಡುತ್ತೇವೆ ಎಂದಿದ್ದಾರೆ ಪ್ರೀತಿಕಾ. ಹಾಗೇ, ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿರುವ ರಂಜಿತ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ನಾವೇ ಭರಿಸುತ್ತೇವೆ ಎಂದು ಪ್ರೀತಿಕಾ ಹೇಳಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles