22.9 C
Bengaluru
Sunday, March 26, 2023
spot_img

‘ನೀ ಸಿಗೋವರೆಗೂ’ : ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿನಯದ 124ನೇ ಚಿತ್ರ

 ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿನಯದ 124ನೇ ಚಿತ್ರಕ್ಕೆ ಮುಹೂರ್ತ ನಡೆಸಲಾಗಿದ್ದು, ರಾಮ್​ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಸಿನಿಮಾದ ಹೆಸರನ್ನು ಬಹಿರಂಗ ಪಡಿಸಲಾಗಿದೆ. ಚಿತ್ರಕ್ಕೆ ‘ನೀ ಸಿಗೋವರೆಗೂ’ ಎಂದು ಹೆಸರಿಡಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ನೀ ಸಿಗೋವರೆಗೂ’ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿದೆ. ವಿಶೇಷ ಎಂದರೆ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದು ಕಿಚ್ಚ ಸುದೀಪ್. ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಮೊದಲ ದೃಶ್ಯಕ್ಕೆ ಕಿಚ್ಚ ಸುದೀಪ್​ ಕ್ಲ್ಯಾಪ್​ ಮಾಡಿದರು.

‘ನೀ ಸಿಗೋವರೆಗೂ’ ಚಿತ್ರಕ್ಕೆ ಶಿವಣ್ಣ ನಿಗೆ ನಾಯಕಿಯಾಗಿ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಮೆರ್ಹೀನ್​ ಪೀರ್ಜಾದಾ ಅವರು ನಟಿಸಲಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು, ಅಗಸ್ಟ್ 18 ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು, ಅಗಸ್ಟ್ 18 ರಿಂದ ಚಿತ್ರೀಕರಣ ಆರಂಭವಾಗಲಿದೆ. ಚರಣ್ ರಾಜ್ ಚಿತ್ರಕ್ಕೆ ಮ್ಯೂಸಿಕ್ ನೀಡುತ್ತಿದ್ದು, ಮಹೇಂದ್ರ ಸಿಂಹ ಛಾಯಾಗ್ರಹಣ ಮಾಡುತ್ತಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles