ಬಹು ನಿರೀಕ್ಷೆಯ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ ‘ಡೆಡ್ ಮ್ಯಾನ್ ಆಂಥಮ್’ ಗೆ ಕಿಚ್ಚನ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಅಭಿನಯ ಚಕ್ರವರ್ತಿ ಸುದೀಪ್ ಅವರ 49ನೇ ಹುಟ್ಟುಹಬ್ಬದ ಸಂಭ್ರಮಕ್ಕೆ ಉಡುಗೊರೆಯಾಗಿ ‘ವಿಕ್ರಾಂತ್ ರೋಣ’ ಚಿತ್ರ ತಂಡ ಟ್ರೇಲರ್ ರಿಲೀಸ್ ಮಾಡಿದೆ.

ಅನೂಪ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರವಾದ ‘ವಿಕ್ರಾಂತ್ ರೋಣ’ ಚಿತ್ರದ‘ಡೆಡ್ ಮ್ಯಾನ್ ಆಂಥೆಮ್’ ಟ್ರೇಲರ್ಬಿಡುಗಡೆ ಆದ ಒಂದು ಗಂಟೆಯೊಳಗೆ 66 ಸಾವಿರ ಲೈಕ್ಸ್ ಆಗಿದೆ. ಟ್ರೇಲರ್ ನಲ್ಲಿ ಕಿಚ್ಚನ ನೂತನ ಸ್ಟೈಲಿಶ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ವಿಕ್ರಾಂತ್ ರೋಣ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಕೂಡ ಕಾಣಿಸಿಕೊಂಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ ಚಿತ್ರತಂಡವು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.
****