ಆರ್ ಕೆ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಪ್ರಿಯಾಂಕ ಉಪೇಂದ್ರ ಅಭಿನಯಿಸಿ, ರಾಜ್ ಕಿರಣ್ ನಿರ್ದೇಶಿಸಿರುವ ‘1980’ ಸಿನಿಮಾದ ಟ್ರೈಲರ್ ಅನ್ನು ಚಿತ್ರ ತಂಡ ಇಂದು ಸಂಜೆ 6.30 ಕ್ಕೆ (13.09.21) ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದೆ.

ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘ ದಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
****