ಶ್ರೀನಗರ ಕಿಟ್ಟಿ ಅಭಿನಯಿಸುತ್ತಿರುವ ಗೌಳಿ ಚಿತ್ರದ ಮುಹೂರ್ತ ಇಂದು ಬೆಂಗಳೂರಿನಲ್ಲಿ ನೆರವೇರಿದ್ದು, ಚಿತ್ರವನ್ನು ಸೂರಾ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್ ಕೂಡ ರಿಲೀಸ್ ಆಗಿದ್ದು. ಸೆಪ್ಟಂಬರ್ 21 ರಿಂದ ಶೂಟಿಂಗ್ ಆರಂಭವಾಗಲಿದೆ, ಯಲ್ಲಾಪುರ ಮತ್ತು ಶಿರಸಿ ಸೇರಿದಂತೆ ಹಲೆವೆಡೆ ಚಿತ್ರೀಕರಣ ನಡೆಯಲಿದೆ.
ಆಯಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಪಾವನಾ ನಾಯಕಿಯಾಗಿ ಕಿಟ್ಟಿ ಜೊತೆ ನಟಿಸುತ್ತಿದ್ದಾರೆ. ಸೋಹನ್ ಫಿಲ್ಮ್ ಫ್ಯಾಕ್ಟಕಿ ಬ್ಯಾನರ್ ಅಡಿ ರಘು ಸಿಂಗಮ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಯಶ್ ಶೆಟ್ಟಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ರಂಗಾಯಣ ರಘು ಮತ್ತು ಶುದ್ದಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಪ್ರಜ್ವಲ್ ಗೌಡ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜನಪ್ರಿಯ ಹಿನ್ನೆಲೆ ಗಾಯಕ ಶಶಾಂಕ್ ಶೇಷಗಿರಿ ಸಂಗೀತ ಸಂಯೋಜಿಸುತ್ತಿದ್ದಾರೆ.