ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹುನಿರೀಕ್ಷೆಯ ತ್ರಿಬಲ್ ರೈಡಿಂಗ್ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹೇಶ್ ಗೌಡ ಸಾರಥ್ಯದಲ್ಲಿ ಮೂಡಿಬಂದಿರುವ ಸಿನಿಮಾ ಯಶಸ್ವಿಯಾಗಿ ಮುಗಿಸಿ ಕ್ಯಾಮರಾಗೆ ಪೋಸ್ ನೀಡಿದ್ದಾರೆ.
ತ್ರಿಬಲ್ ರೈಡಿಂಗ್ ಚಿತ್ರದಲ್ಲಿ ಮೂವರು ನಾಯಕಿಯರು ಕಾಣಿಸಿಕೊಂಡಿದ್ದಾರೆ. ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ, ಲವ್ ಮಾಕ್ಟೈಲ್ ಸಿನಿಮಾ ಖ್ಯಾತಿಯ ನಟ ರಚನಾ ಮತ್ತು ಅದಿತಿ ಪ್ರಭುದೇವ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚಿಗಷ್ಟೆ ಈ ಸಿನಿಮಾ ಅದ್ದೂರಿ ಹಾಡು ಸೆರೆಹಿಡಿದಿದ್ದು, ಗಣೇಶ್ ಮೂವರು ನಾಯಕಿಯರ ಜೊತೆ ಹೆಜ್ಜೆಹಾಕಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. ಹಾಸ್ಯ ನಟ ಸಾಧುಕೋಕಿಲ, ರಂಗಾಯಣ ರಘು, ರವಿಶಂಕರ್ ಗೌಡ, ಕುರಿ ಪ್ರತಾಪ್, ಡಿಂಗ್ರಿ ನಾಗರಾಜ್ ಸೇರಿದಂತೆ ಅನೇಕ ಪ್ರಸಿದ್ಧ ಕಲಾವಿದರು ನಟಿಸಿದ್ದಾರೆ.
****