ಎಲ್ಲವೂ ಅಂದುಕೊಂಡತೆ ಆಗಿದ್ದರೆ ಇಷ್ಟರಲ್ಲಿ ಉಪೇಂದ್ರ ಮತ್ತು ಮಂಜು ಮಾಂಡವ್ಯ ಕಾಂಬಿನೇಶನ್ ಅಲ್ಲಿ ಚಿತ್ರೀಕರಣ ಪ್ರಾರಂಭವಾಗಬೇಕಿತ್ತು ಆದರೆ ಕೊರೊನಾ ಕಾರಣಕ್ಕೆ ಸ್ವಲ್ಪ ವಿಳಂಬವಾಗಿದೆ. ರನ್ನ ಚಿತ್ರದ ನಿರ್ಮಾಪಕ ಚಂದ್ರಶೇಖರ್ ಜೊತೆಯಲ್ಲಿ ಉಪೇಂದ್ರ ಸಿನಿಮಾ ಮಾಡಬೇಕಿತ್ತು ದುರಾದೃಷ್ಟವಶಾತ್ ನಿರ್ಮಾಪಕ ಚಂದ್ರುಶೇಖರ್ ಅವರು ಕೋವಿಡ್ ನಿಂದ ಮೃತಪಟ್ಟ ಹಿನ್ನಲೆಯಲ್ಲಿ ಅದು ಸಾಧ್ಯವಾಗಲಿಲ್ಲ.
ಈಗ ಮಂಜು ಮಾಂಡವ್ಯ ಮತ್ತು ಉಪೇಂದ್ರ ಅವರ ಕಾಂಬಿನೇಶನ್ ನಲ್ಲಿ ಸಿನಿಮ ಸೆಟ್ಟೇರುವ ಸುದ್ದಿ ಗಾಂಧಿನಗರದಲ್ಲಿ ಸುಳಿದಾಡಿದ್ದು ಚಿತ್ರಕ್ಕೆ ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪಾತಿಕೊಂಡ ಹಣ ಹೂಡಲಿದ್ದಾರೆ ಎಂದು ತಿಳಿದು ಬಂದಿದೆ.
ಮಂಜು ಮಾಂಡವ್ಯ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾ ಪ್ರಯೋಗಾತ್ಮಕವಾಗಿರಲಿದೆ ಎನ್ನುವ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಮಂಜು ಅವರು ಉಪೇಂದ್ರ ಅವರ ಜೊತೆ ಸಿನಿಮಾ ಕುರಿತು ಮಾತುಕತೆ ನಡೆಸುತ್ತಿದ್ದು ಮುಂಬರುವ ದಿನಗಳಲ್ಲಿ ಹೆಚ್ಚಿನ ಮಾಹಿತಿ ತಿಳಿದುಬರಲಿದೆ. ಉಪೇಂದ್ರ ಅವರು ಹೋಮ್ ಮಿನಿಸ್ಟರ್ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ನಿರ್ದೇಶಕ ಆರ್ ಚಂದ್ರು ಮತ್ತು ಉಪೇಂದ್ರ ಕಾಂಬಿನೇಷನ್ ನಲ್ಲಿ ಮೂಡಿಬಂಡಿರುವ ‘ಕಬ್ಜಾ’ ತೆರೆಗೆ ಬರಲು ಸಿದ್ಧವಾಗಿದೆ.
****