ಇಂದು(ಸೆ.24) ನಿಖಿಲ್ ,ರೇವತಿ ದಂಪತಿಗೆ ಗಂಡು ಮಗು ಜನಿಸಿದ್ದು ಹೆಚ್ಡಿಡಿ ಕುಟುಂಬ ಸಂಭ್ರಮ ಮತ್ತು ಸಡಗರ ತೇಲುತ್ತಿದೆ. ಇಂದು ಖಾಸಗಿ ಆಸ್ಪತ್ರೆಯಲ್ಲಿ ಸೊಸೆ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಸೊಸೆ ಮತ್ತು ಮೊಮ್ಮಗನನ್ನು ನೋಡಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಆಸ್ಪತ್ರಗೆ ಭೇಟಿ ನೀಡಿದರು. ಮೊಮ್ಮಗನ್ನು ನೋಡಿ ಮುದ್ದಾಡಿ ಖುಷಿ ಪಟ್ಟ ಕುಮಾರಸ್ವಾಮಿ ಸೊಸೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.
ಮೊಮ್ಮಗ ಜನಿಸಿರುವ ಬಗ್ಗೆ ಟ್ವೀಟ್ ಮೂಲಕ ಖುಷಿ ಹಂಚಿಕೊಂಡಿರುವ ಅವರು, ತನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ ಎಂದಿದ್ಧಾರೆ. ‘‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’’ ಎಂದು ಅವರು ಟ್ವೀಟ್ ಮಾಡಿದ್ದಾರೆ.
****