22.9 C
Bengaluru
Sunday, March 26, 2023
spot_img

ಜಗ್ಗೇಶ್ ಪುತ್ರ ಗುರುರಾಜ್ ನಟನೆಯ ‘ಕಾಗೆ ಮೊಟ್ಟೆ’ ಇಂದು ಬಿಡುಗಡೆ..!

ಇಂದು ಬಿಡುಗಡೆಯಾಗಿರುವ ನಟ ಜಗ್ಗೇಶ್ ಪುತ್ರ ಗುರುರಾಜ್ ನಟಿಸಿರುವ ‘ಕಾಗೆ ಮೊಟ್ಟೆ’ ಚಿತ್ರವನ್ನು ಪ್ರೇಕ್ಷಕರು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಚಿತ್ರಮಂದಿರಗಳಲ್ಲಿ ಶೇ 100% ಭರ್ತಿಗೆ ಅವಕಾಶ ನೀಡಿರುವುದರಿಂದ ಕಳೆಗುಂದಿದ್ದ ಗಾಂಧಿನಗರ ಮತ್ತೆ ಸಂಭ್ರಮದಿಂದ ನಳನಳಿಸುತ್ತಿದೆ.

ಶೇ 100% ಆಕ್ಯೂಪೆನ್ಸಿಗೆ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ಪ್ರೇಕ್ಷಕರು ಮತ್ತೆ ಆಗಮಿಸಿದ್ದಾರೆ. ಇಂದು ತ್ರಿವೇಣಿ ಚಿತ್ರಮಂದಿರದಲ್ಲಿ ಬಿಡುಗಡೆಯಾದ ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಅಭಿನಯದ ‘ಕಾಗೆ ಮೊಟ್ಟೆ’ ಚಿತ್ರವನ್ನು ವೀಕ್ಷಿಸಲು ಸಾಕಷ್ಟು ಅಭಿಮಾನಿಗಳು ಧಾವಿಸಿ ಬಂದಿದ್ದಾರೆ. ಚಿತ್ರಮಂದಿರ ಸಂಪೂರ್ಣವಾಗಿ ತೆರೆದಿರುವ ಕುರಿತು ಸಂತಸ ಹಂಚಿಕೊಂಡಿರುವ ಪ್ರೇಕ್ಷಕರು, ‘ಇಷ್ಟು ದಿನ ಈ ಸಂಭ್ರಮ ಮಿಸ್ ಮಾಡಿಕೊಳ್ಳುತ್ತಿದ್ದೆವು’ ಎಂದಿದ್ದಾರೆ. ಚಿತ್ರಮಂದಿರಗಳಲ್ಲಿ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದ್ದು, ಮಾಸ್ಕ್ ಧರಿಸಿದ್ದರೆ ಮಾತ್ರ ಥಿಯೇಟರ್​ಗೆ ಪ್ರವೇಶ ನೀಡಲಾಗುತ್ತಿದೆ. ಚಿತ್ರಮಂದಿರಗಳು ಸ್ವಚ್ಛತೆಗೆ ಹೆಚ್ಚು ಒತ್ತನ್ನು ನೀಡಿವೆ.

ಮಾಗಡಿ ರಸ್ತೆಯಲ್ಲಿರುವ ವೀರೇಶ್ ಸಿನಿಮಾಸ್​ನಲ್ಲಿಯೂ ಪ್ರೇಕ್ಷಕರು ಸಂಭ್ರಮದಿಂದ ಆಗಮಿಸುತ್ತಿರುವ ದೃಶ್ಯ ಕಂಡುಬಂದಿದೆ. ಪ್ರೇಕ್ಷಕರು ಟಿಕೆಟ್ ಕೊಳ್ಳಲು ಸರತಿ ಸಾಲಿನಲ್ಲಿ ನಿಂತಿದ್ದು, ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಸ್ಕ್ರೀನ್ – 1 ನಲ್ಲಿ ತೆಲುಗಿನ ‘ರಿಪಬ್ಲಿಕ್‌’ ಹಾಗೂ ಸ್ಕ್ರೀನ್- 2ನಲ್ಲಿ ಕನ್ನಡದ ‘ಕಾಗೆಮೊಟ್ಟೆ’ ಚಿತ್ರದ ಪ್ರದರ್ಶನ ನಡೆಯುತ್ತಿದೆ.

‘ಕಾಗೆ ಮೊಟ್ಟೆ’ ಚಿತ್ರದಲ್ಲಿ ಗುರುರಾಜ್ ಜಗ್ಗೇಶ್ ಜೊತೆ ಕೆ. ಮಾದೇಶ್ ಹಾಗೂ ಹೇಮಂತ್ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ತನುಜಾ ಅವರು ಈ ಚಿತ್ರದ ನಾಯಕಿ​. ಸಹ ನಿರ್ಮಾಪಕರಾಗಿ ಸುಬ್ಬರಾಯುಡು ಹಾಗೂ ಹೆಚ್.ಎನ್. ಶ್ರೀನಿವಾಸಯ್ಯ ಇವರ ಜೊತೆ ಕೈಜೋಡಿಸಿದ್ದಾರೆ. ಕೊಳ್ಳೇಗಾಲ, ಚಾಮರಾಜನಗರ ಅಲ್ಲದೆ ಬೆಂಗಳೂರಿನ ಹಲವಾರು ಸ್ಲಂಗಳಲ್ಲಿ ಚಿತ್ರದ ಶೂಟಿಂಗ್ ನಡೆಸಲಾಗಿದ್ದು, ಮೂವರು ಹುಡುಗರಿಗೆ ನಗರದಲ್ಲಿ ಬೆನ್ನೆಲುಬಾಗಿ ನಿಲ್ಲುವ ವೇಶ್ಯೆಯ ಪಾತ್ರವನ್ನು ನಟಿ ಸೌಜನ್ಯ ನಿರ್ವಹಿಸಿದ್ದಾರೆ. ಚಿತ್ರದಲ್ಲಿ 2 ಹಾಡುಗಳಿವೆ. ಶ್ರೀವತ್ಸ ಸಂಗೀತ ನಿರ್ದೇಶನ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್, ಜಯಂತ್ ಕಾಯ್ಕಿಣಿ, ಕವಿರಾಜ್ ಸಾಹಿತ್ಯ ರಚಿಸಿದ್ದಾರೆ. ನಟ ಜಗ್ಗೇಶ್ ಒಂದು ಹಾಡು ಬರೆದಿರುವುದು ಮಾತ್ರವಲ್ಲದೆ, ಅದಕ್ಕೆ ತಾವೇ ದನಿಯಾಗಿದ್ದಾರೆ. ಪಿ.ಎಲ್. ರವಿ ಛಾಯಾಗ್ರಹಣ ಮಾಡಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles