ಸ್ಯಾಂಡಲ್ ವುಡ್ ನಲ್ಲಿ ಹೆಚ್ಚು ನಿರೀಕ್ಷೆ ಹುಟ್ಟಿಸಿರುವ ಆರ್ ಚಂದ್ರು ನಿರ್ದೇಶನದ, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜಾ’ ಈಗ 5ನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿರುವ ಸುದ್ದಿ ತಿಳಿದೇ ಇದೆ, ನಿರ್ದೇಶಕ ಆರ್ ಚಂದ್ರು ಮತ್ತೊಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
‘ಕಬ್ಜಾ’ ಚಿತ್ರದಲ್ಲಿ ಬಾಲಿವುಡ್ ನಟ ನವಾಬ್ ಶಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಆರ್ ಚಂದ್ರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ನವಾಬ್ ಶಾ ಅವರನ್ನು ಸಿನಿಮಾಗೆ ಸ್ವಾಗತ ಮಾಡುವ ಮೂಲಕ ನಿರ್ದೇಶಕ ಆರ್ ಚಂದ್ರು ನವಾಬ್ ಶಾ ಎಂಟ್ರಿಯನ್ನು ಬಹಿರಂಗ ಪಡಿಸಿದ್ದಾರೆ.
ನಟ ನವಾಬ್ ಶಾ ಈಗಾಗಲೇ ಕನ್ನಡದಲ್ಲಿ ನಟಿಸಿದ್ದಾರೆ. ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡದ ಈ ಸಿನಿಮಾ ಬಿಡುಗಡೆಗೂ ಮೊದಲೇ ನವಾಬ್ ಶಾ ಮತ್ತೊಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು ನಟ ಕಾಮರಾಜನ್, ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್ ಸೇರಿದಂತೆ ಇನ್ನಿತರರು ನಟಿಸಿದ್ದಾರೆ.
****