ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹುಟ್ಟುಹಬ್ಬದ ದಿನವನ್ನು ದೊಡ್ಡದಾಗಿ ಸೆಲೆಬ್ರೇಟ್ ಮಾಡಬೇಕು ಎಂಬ ಆಸೆ ಅಭಿಮಾನಿಗಳಿಗೆ ಇದ್ದೇ ಇರುತ್ತದೆ. ಆದರೆ ಆ ಬಗ್ಗೆ ಧ್ರುವ ಸರ್ಜಾ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಾರಿ ಜನ್ಮದಿನ ಆಚರಿಸಿಕೊಳ್ಳದೇ ಇರಲು ಅವರು ನಿರ್ಧರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿಕೊಳ್ಳುವ ಮೂಲಕ ಅವರು ತಮ್ಮ ತೀರ್ಮಾನ ಏನೆಂಬುದನ್ನು ಈಗಾಗಲೇ ತಿಳಿಸಿದ್ದಾರೆ.ಅಣ್ಣ ಚಿರು ಅಗಲಿಕೆಯ ನೋವು ಹಾಗೂ ಕೊರೊನಾ ಹಿನ್ನೆಲೆಯಲ್ಲಿ ಅಭಿಮಾನಿಗಳ ಜೊತೆಗಿನ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ನಟ ಧ್ರುವ ಸರ್ಜಾ ಬ್ರೇಕ್ ಹಾಕಿದ್ದಾರೆ. ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಈ ಬಗ್ಗೆ ಸಂದೇಶ ರವಾನಿಸಿದ್ದಾರೆ.
ಸಿಂಪಲ್ ಆಗಿ ಬರ್ತ್ ಡೇ ಸೆಲೆಬ್ರೆಶನ್ ಪ್ಲಾನ್ ಮಾಡಿರುವ ಧ್ರುವ ಸರ್ಜಾ, ಸದ್ಯ ಬೆಂಗಳೂರಿನಲ್ಲಿಲ್ಲ ವೈಜಾಗ್ನಲ್ಲಿ ಶೂಟಿಂಗ್ನಲ್ಲಿರುವುದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ ಅಭಿಮಾನಿಗಳಿಗೆ ಬರ್ತ್ ಡೇಗೆ ಆಗಮಿಸದಂತೆ ಮನವಿ ಮಾಡಿದ್ದಾರೆ. ಈ ನಡುವೆ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ನ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಮತ್ತೊಂದು ಖಡಕ್ ಲುಕ್ ನಲ್ಲಿರುವ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಧ್ರುವ ಸರ್ಜಾಗೆ ಶುಭಾಶಯ ಕೋರಿದೆ.

****