ಕಡಲ ತಡಿಯಲ್ಲಿ ನಡೆಯುವ ಪ್ರೇಮಕಥೆ ಹಾಗಾಗಿ ಇದು ‘ಕಡಲ ತೀರದ ಭಾರ್ಗವ’ ಆದರೆ ಡಾ ಶಿವರಾಮ ಕಾರಂತರಿಗೂ ಚಿತ್ರಕ್ಕೂ ಯಾವ ಸಂಬಂಧವೂ ಇಲ್ಲಾ. ಕಡಲ ತೀರದ ಭಾರ್ಗವ ಎಂದ ತಕ್ಷಣ ನಮಗೆ ನೆನಪಿಗೆ ಬರೋದು ಶಿವರಾಮ ಕಾರಂತರು. ಅದು ಅವರಿಗೆ ನೀಡಿದ್ದ ಬಿರುದ್ದು. ಆ ಹೆಸರಲ್ಲೆ ಸ್ಯಾಂಡಲ್ ವುಡ್ ನಲ್ಲಿ ಚಿತ್ರ ಬಿಡುಗಡೆ ಗೆ ಸಿದ್ದವಾಗಿದೆ ಅದೇ ‘ಕಡಲ ತೀರದ ಭಾರ್ಗವ’ ಇದೇ ಅ.18 ಕ್ಕೆ ಟೀಸರ್ ರಿಲೀಸ್ ಆಗುತ್ತಿದೆ.
ಟೀಸರ್ ರಿಲೀಸ್ ಆಗುವಾಗಲೇ ಚಿತ್ರ ಯಾವ ಸಮಯದಲ್ಲಿ ಬಿಡುಗಡೆ ಆಗಲಿದೆ ಎನ್ನುವ ಮಾಹಿತಿಯನ್ನು ಚಿತ್ರ ತಂಡ ನೀಡಲಿದೆಯಂತೆ. ಚಿತ್ರ ಏವಕಲ್ಯ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ವರುಣ್ ರಾಜು ಪಟೇಲ್ ಹಾಗೂ ಭರತ್ಗೌಡ ಈ ಚಿತ್ರದ ನಿರ್ಮಾಪಕರು. ವಿಜಯಂ ವಜ್ರ ವೆಂಚರ್ಸ್ ಸಹ ನಿರ್ಮಾಣ ಈ ಚಿತ್ರಕ್ಕಿದೆ. ಪೂರ್ವಭಾವಿಯಾಗಿ ಅ. 18ರಂದು ಟೀಸರ್ ಬಿಡುಗಡೆ ಆಗಲಿದೆ.
ನಿರ್ಮಾಪಕರಾದ ಭರತ್ ಗೌಡ ಹಾಗೂ ವರುಣ್ ರಾಜು ಪಟೇಲ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ. ಶ್ರುತಿ ಪ್ರಕಾಶ್ ಈ ಚಿತ್ರದ ನಾಯಕಿ. ಈಟಿವಿ ಶ್ರೀಧರ್, ರಾಘವ್ ನಾಗ್, ಅಶ್ವಿನ್ ಹಾಸನ್ ತಾರಾಬಳಗದಲ್ಲಿದ್ದಾರೆ. ಬೆಂಗಳೂರು, ಉಡುಪಿ, ಮುರುಡೇಶ್ವರ ಕಡಲತೀರಗಳಲ್ಲಿ ಚಿತ್ರೀಕರಣ ನಡೆದಿದೆ.
ಪನ್ನಗ ಸೋಮಶೇಖರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ. ಸಂಗೀತ ನಿರ್ದೇಶನ, ಕೀರ್ತನ್ ಪೂಜಾರ್ ಛಾಯಾಗ್ರಹಣ ಹಾಗೂ ಆಶಿಕ್ ಕುಸುಗೊಳ್ಳಿ ಅವರದ್ದು.
****