ಇತ್ತೀಚೆಗಷ್ಟೆ ಮುಂಬೈನಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದ ಕೆಜಿಎಫ್ ಚಾಪ್ಟರ್ 2 ಸಿನಿಮಾದ ನಟ-ರಾಕಿಂಗ್ ಸ್ಟಾರ್ ಯಶ್ ಈಗ ತಮ್ಮ ಮಡದಿ ರಾಧಿಕಾ ಪಂಡಿತ್ ಜೊತೆ ದುಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು, ಈ ರಾಕಿಂಗ್ ಜೋಡಿ ದುಬೈ ಪ್ರವಾಸದ ಚಿತ್ರಗಳು ವೈರಲ್ ಆಗುತ್ತಿವೆ.
ರಾಧಿಕಾ ಪಂಡಿತ್ ಹಾಗೂ ಯಶ್ ಅವರು ದುಬೈಗೆ ಕಾಲಿಡುತ್ತಿದ್ದಂತೆಯೇ ಅಲ್ಲಿನ ಅಧಿಕಾರಿಗಳು ಈ ಜೋಡಿಯನ್ನು ಸ್ವಾಗತಿಸಿದ್ದಾರೆ. ಯಶ್ ಅವರ ಜೊತೆ ಅವರ ಅಭಿಮಾನಿಗಳು ಫೋಟೋಗಳನ್ನು ತೆಗೆಸಿಕೊಳ್ಳುತ್ತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಯಶ್ ಜಾಹೀರಾತಿನ ಶೂಟಿಂಗೆಂದು ದುಬೈಗೆ ಹೋಗಿದ್ದಾರೆ. ಈ ಸಲ ಹೋಗುವಾಗ ಮಡದಿಯನ್ನೂ ಜೊತೆಗೆ ಕರೆದುಕೊಂಡು ಹೋಗಿದ್ದಾರೆ. ಇನ್ನು ಯಶ್ ಇತ್ತೀಚೆಗೆ ಸಾಕಷ್ಟು ಬ್ರ್ಯಾಂಡ್ಗಳ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.


****