ಸ್ಯಾಂಡಲ್ ವಡ್ ನಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ನಾಳೆ ಬಿಡುಗಡೆ ಆಗಲಿದೆ ಎಂದು ಚಿತ್ರ ತಂಡ ಘೋಷಿಸಿದೆ. ಈ ಮೂಲಕ ಆಯುಧಪೂಜೆ ದಿನ ಚಿತ್ರ ವೀಕ್ಷಿಸುವ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ ಆಗಿದೆ ಕೋಟಿಗೊಬ್ಬ 3 ಚಿತ್ರದ ನಿರ್ಮಾಪಕರಾದ ಸೂರಪ್ಪ ಬಾಬು ಚಿತ್ರ ಬಿಡುಗಡೆ ಆಗದೇ ಇರುವುದಕ್ಕೆ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.
ಅಕ್ಟೋಬರ್ 14ರಂದು ಚಿತ್ರ ಬಿಡುಗಡೆ ಆಗುವುದಾಗಿ ಚಿತ್ರ ತಂಡ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಕೋಟಿಗೋಬ್ಬ-3 ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಚಿತ್ರ ಇಂದು ಬಿಡುಗಡೆ ಆಗುತ್ತಿಲ್ಲ ಎಂದು ಚಿತ್ರ ತಂಡ ಘೋಷಿಸಿದೆ.
ಮುಂಗಡ ಟಿಕೆಟ್ ಬುಕ್ಕಿಂಗ್ ಆಗಿದ್ದರಿಂದ ಗುರುವಾರ ಬೆಳಿಗ್ಗೆಯಿಂದಲೇ ಅಭಿಮಾನಿಗಳು ಥಿಯೇಟರ್ ಮುಂದೆ ಜಮಾಯಿಸಿದ್ದರು. ಬೆಳಿಗ್ಗೆ 7 ಗಂಟೆ ಶೋ ಪ್ರಿಂಟ್ ಬಾರದ ಕಾರಣ ರದ್ದುಗೊಳಿಸಲಾಗಿತ್ತು. ಅಲ್ಲದೇ ಬೆಳಿಗ್ಗೆ 10.30ರ ಶೋ ಕೂಡ ರದ್ದುಗೊಂಡಿದ್ದರಿಂದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
****