ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮುಂಬೈಯ ವಿಶೇಷ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.ಪ್ರಕರಣಕ್ಕೆ ಸಂಬಂಧಿಸಿ ಆರ್ಯನ್ ಅವರನ್ನು ಮಾದಕ ಪದಾರ್ಥ ನಿಯಂತ್ರಣ ಘಟಕ (ಎನ್‌ಸಿಬಿ) ಅಕ್ಟೋಬರ್ 2ರಂದು ಬಂಧಿಸಿತ್ತು.
ಅಕ್ಟೋಬರ್ 14ರ ವಿಚಾರಣೆ ವೇಳೆ ಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದ ಎನ್‌ಸಿಬಿ, ಆರ್ಯನ್ ಅವರು ನಿರಂತರವಾಗಿ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿತ್ತು. ಡ್ರಗ್ಸ್ ಖರೀದಿಗೆ ಸಂಬಂಧಿಸಿ ಆರ್ಯನ್ ಅವರು ನಡೆಸಿದ್ದಾರೆ ಎನ್ನಲಾದ ವಾಟ್ಸ್‌ಆಯಪ್ ಚಾಟ್ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಅಲ್ಲದೆ, ಅವರಿಗೆ ಜಾಮೀನು ನೀಡುವುದನ್ನು ವಿರೋಧಿಸಿತ್ತು.
****