29.4 C
Bengaluru
Sunday, February 5, 2023
spot_img

ಹೊಸತನದಲ್ಲಿ 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರೀ-ರಿಲೀಸ್ ಆಗುತ್ತಿದೆ ಅಣ್ಣಾವ್ರ ಭಾಗ್ಯವಂತರು ಸಿನಿಮಾ

ಡಾ ರಾಜ್​ಕುಮಾರ್​ ನಟನೆಯ ಸಾಕಷ್ಟು ಸಿನಿಮಾಗಳು ಸೂಪರ್​ ಹಿಟ್​ ಸಾಲಿನಲ್ಲಿವೆ. ಈ ಪೈಕಿ ಅನೇಕ ಸಿನಿಮಾಗಳನ್ನು ವಿನೂತನ ತಂತ್ರಜ್ಞಾನ ಬಳಸಿ ಹೊಸ ರೂಪದಲ್ಲಿ ರಿಲೀಸ್​ ಮಾಡುವ ಪ್ರಯತ್ನ ನಡೆದಿದೆ. ಈಗ ರಾಜ್​ಕುಮಾರ್​ ನಟನೆಯ ‘ಭಾಗ್ಯವಂತರು’ ಸಿನಿಮಾ ನವೆಂಬರ್​ನಲ್ಲಿ ರೀ-ರಿಲೀಸ್​ ಆಗುತ್ತಿದೆ. ಡಿ.ಐ, 7.1 ಟ್ರ್ಯಾಕ್ ಸೇರಿದಂತೆ ಅನೇಕ ಹೊಸ ತಂತ್ರಜ್ಞಾನ ಅಳವಡಿಕೆಯೊಂದಿಗೆ ಸಿನಿಮಾ ಮರು ಬಿಡುಗಡೆಯಾಗುತ್ತಿದೆ. ಮುನಿರಾಜು ಈ ಚಿತ್ರವನ್ನು ಮತ್ತೆ ತೆರೆಗೆ ತರುವ ಪ್ರಯತ್ನ ಮಾಡಿದ್ದಾರೆ.

ಎಚ್​​.ಆರ್​​. ಭಾರ್ಗವ್​ ಅವರ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಭಾಗ್ಯವಂತರು’ ಚಿತ್ರದಲ್ಲಿ ರಾಜ್​ಕುಮಾರ್ ಹಾಗೂ ಬಿ.ಸರೋಜಾದೇವಿ ಅವರು ನಟಿಸಿದ್ದರು. ದ್ವಾರಕೀಶ್ ಈ ಚಿತ್ರದ ನಿರ್ಮಾಪಕರು. ಸಿನಿಮಾ ರೀ-ರೀಲಿಸ್​ ಆಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಭಾರ್ಗವ್​, ‘ನಾನು ಆಗಲೇ ರಾಜ್​ಕುಮಾರ್ ಅವರು ನಟಿಸಿದ್ದ ಬಬ್ರುವಾಹನ, ನಾ ನಿನ್ನ ಮರೆಯಲಾರೆ, ಜಗ ಮೆಚ್ಚಿದ ಮಗ ಸೇರಿದಂತೆ ಅನೇಕ ಚಿತ್ರಗಳಿಗೆ ಸಹ ನಿರ್ದೇಶನ ಮಾಡಿದ್ದೆ. ಹಾಗಾಗಿ ರಾಜ್ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ . ನನಗೂ ಅವರೆಂದರೆ ಅಷ್ಟೇ ಪ್ರೀತಿ. ನಿರ್ಮಾಪಕ ದ್ವಾರಕೀಶ್ ಹಾಗೂ ರಾಜ್​ಕುಮಾರ್ ಇಬ್ಬರೂ ನೀವೆ ಈ ಚಿತ್ರ ನಿರ್ದೇಶನ ಮಾಡಬೇಕು ಎಂದರು. ಆಗ ನಾನು ‘ಭಾಗ್ಯವಂತರು’ ಚಿತ್ರವನ್ನು ನಿರ್ದೇಶಿಸಿದೆ. ನನ್ನ ಮೊದಲ ನಿರ್ದೇಶನದ ಚಿತ್ರವೇ ಸೂಪರ್ ಹಿಟ್ ಆಯಿತು. ಈಗ ಮುನಿರಾಜು ನೂತನ ತಂತ್ರಜ್ಞಾನ ಅಳವಡಿಕೆಯೊಂದಿಗೆ ಈ ಚಿತ್ರವನ್ನು ಮರು‌ ಬಿಡುಗಡೆ ಮಾಡುತ್ತಿದ್ದಾರೆ ಅವರಿಗೆ ಒಳ್ಳೆಯದಾಗಲಿ’ ಎಂದರು ಹಿರಿಯ ನಿರ್ದೇಶಕ ಭಾರ್ಗವ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles