ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ “ವೆಡ್ಡಿಂಗ್ ಗಿಫ್ಟ್” ಚಿತ್ರದ ಚಿತ್ರೀಕರಣ ನವೆಂಬರ್ 15 ರಿಂದ ಆರಂಭವಾಗಲಿದೆ. ಬೆಂಗಳೂರು, ಉಡುಪಿ, ಮಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ನಿಶಾನ್ ನಾಣಯ್ಯ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದು, ಸೋನು ಗೌಡ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ವಿಶೇಷ ಪಾತ್ರದಲ್ಲಿ ಹಿರಿಯ ನಟಿ ಪ್ರೇಮ ಕಾಣಿಸಿಕೊಳ್ಳಲಿದ್ದಾರೆ. ಪವಿತ್ರ ಲೋಕೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕನ್ನಡ ಚಿತ್ರರಂಗದ ಒಂದು ಕಾಲದ ಬಹುಬೇಡಿಕೆಯ ನಟಿ ಪ್ರೇಮಾ ಕೆಲವು ಸಮಯದಿಂದ ಬಣ್ಣದ ಲೋಕದಿಂದ ದೂರವೇ ಉಳಿದಿದ್ದರು. ಆದರೆ ಇದೀಗ ಮತ್ತೆ ಪ್ರೇಮಾ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಉಪೇಂದ್ರ ಮತ್ತೆ ಬಾ ಅವರ ಕೊನೆಯ ಚಿತ್ರವಾಗಿತ್ತು. ಇದೀಗ ಬರೋಬ್ಬರಿ ಮೂರೂವರೆ ವರ್ಷಗಳ ಗ್ಯಾಪ್ ಬಳಿಕ ‘ವೆಡ್ಡಿಂಗ್ ಗಿಫ್ಟ್’ ಸಿನಿಮಾ ಮೂಲಕ ಸಿನಿಮಾಗೆ ಎಂಟ್ರಿಕೊಡುತ್ತಿದ್ದಾರೆ. ಈ ಸಿನಿಮಾದಲ್ಲಿ ಪ್ರೇಮಾ ಲಾಯರ್ ಪಾತ್ರ ಮಾಡಲಿದ್ದಾರಂತೆ. ಬಹುತೇಕ ಹೊಸಬರ ತಾರಾಗಣವಿರುವ ಈ ಸಿನಿಮಾದಲ್ಲಿ ಪ್ರೇಮಾ ಡಿಫರೆಂಟ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಚಿತ್ರಕ್ಕೆ ನಿರ್ದೇಶಕರು, ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಸಂಜಯ್ ಶರ್ಮ, ಅಭಯ್ ದೇವ್ ಪುರಿ, ಅಶೀಶ್ ಪಾವಸ್ಕರ್ ಬರೆದಿದ್ದಾರೆ. ಸತೀಶ್ ಹೆಚ್ ವಿ ಹಾಗೂ ಆಂಟೋನಿ ಎಮ್ ಈ ಚಿತ್ರದ ಸಹ ನಿರ್ದೇಶಕರು.ಮೂರು ಹಾಡುಗಳಿದ್ದು, ಬಾಲಚಂದ್ರ ಪ್ರಭು ಸಂಗೀತ ನೀಡಲಿದ್ದಾರೆ. ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ಅವರ ಗೀತರಚನೆ ಹಾಗೂ ಉದಯಲೀಲ ಅವರ ಛಾಯಾಗ್ರಹಣ “ವೆಡ್ಡಿಂಗ್ ಗಿಫ್ಟ್” ಚಿತ್ರಕ್ಕಿರಲಿದೆ.
****