ಸ್ಯಾಂಡಲ್ ವುಡ್ ನ ಬಹು ನಿರೀಕ್ಷೆಯ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಮತ್ತು ಎ ಹರ್ಷ ಕಾಂಬಿನೇಶನ್ ಸಿನಿಮಾ ಭಜರಂಗಿ 2 ಇದೇ ಅಕ್ಟೋಬರ್ 29 ರಂದು ತೆರೆಗೆ ಬರುತ್ತಿರುವುದು ಈಗಾಗಲೇ ಎಲ್ಲರಿಗೂ ಗೊತ್ತಿರುವ ವಿಷಯ, ಭಜರಂಗಿ 2 ಚಿತ್ರದ ಪ್ರಿ ರಿಲೀಸ್ ಇವೆಂಟ್ ಅಕ್ಟೋಬರ್ 26ರಂದು ನಡೆಯುತ್ತಿದೆ.

ಭಜರಂಗಿ 2 ಚಿತ್ರ ಈಗಾಗಲೇ ಗಾಂಧಿನಗರದ ಪಡಸಾಲೆಯಲ್ಲಿ ಬಾರಿ ಸದ್ದು ಮಾಡುತ್ತಿದೆ, ಈಗ ಅದರ ಪ್ರಿ ರಿಲೀಸ್ ಇವೆಂಟ್ ಕೂಡ ಭರ್ಜರಿಯಾಗಿ ನಡೆಯುತ್ತಿದ್ದು ಈ ಕಾರ್ಯಕ್ರಮಕ್ಕೆ ರಾಕಿಂಗ್ ಸ್ಟಾರ್ ಯಶ್ ಮತ್ತು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭಾಗವಹಿಸಲಿದ್ದಾರೆ. ಈ ಹಿಂದೆ ಶಿವಣ್ಣ ಮತ್ತು ಹರ್ಷ ಕಾಂಬೊದಲ್ಲಿ ಮೂಡಿ ಬಂದಿದ್ದ ಭಜರಂಗಿ ಸ್ಯಾಂಡಲ್ ವುಡ್ ನಲ್ಲಿ ಫುಲ್ ಸಕ್ಸಸ್ ಕಂಡಿತ್ತು, ಈಗ ಭಜರಂಗಿ 2 ಕೂಡ ಅಷ್ಟೇ ಹೈಪ್ ಕ್ರಿಯೇಟ್ ಮಾಡಿದೆ. ಟೀಸರ್, ಟ್ರೈಲರ್ ಮತ್ತು ಪೋಸ್ಟರ್ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಭಜರಂಗಿ 2 ರಿಲೀಸ್ ನಂತರ ಮತ್ತಿನ್ನೇನು ಕ್ರೇಜ್ ಕ್ರಿಯೇಟ್ ಮಾಡುತ್ತೊ ಕಾದು ನೋಡಬೇಕಿದೆ.

ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದು, ಈಗಾಗಲೇ ಯೂಟ್ಯೂಬ್‌ನಲ್ಲಿ ಭಜರಂಗಿಯ ಹಾಡುಗಳಿಗೆ ಸಂಗೀತ ಆರಾಧಕರು ತಲೆದೂಗಿದ್ದಾರೆ. ಹಾಗೂ ಬಿಡುಗಡೆಯಾಗಿರುವ ಮೊದಲ ಟೀಸರ್ ಮತ್ತು ಪೋಸ್ಟರ್ಗಳು ಅಭಿಮಾನಿಗಳನ್ನು ಹುಚ್ಚೆಬ್ಬಿಸಿವೆ. ಇನ್ನು ದೀಪು ಎಸ್. ಕುಮಾರ್ ಸಂಕಲನ, ಸ್ವಾಮಿ ಅವರ ಕ್ಯಾಮೆರಾ ಕೈಚಳಕವಿದೆ. ರವಿ ಸಂತೆಹೈಕ್ಲು ಕಲಾ ನಿರ್ದೇಶನವಿದ್ದು, ರಘು ನಿಡುವಳ್ಳಿ ಸಂಭಾಷಣೆ, ರವಿವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ.
****