“ತ್ರಿಶೂಲಂ” ಚಿತ್ರದ ಬಗ್ಗೆ ತಿಳಿದುಕೊಂಡಿರುವ ವಿದೇಶಿಗರು(ಇಂಗ್ಲೆಂಡ್) ಈ ಚಿತ್ರದ ವ್ಯಾಪಾರಕ್ಕೆ ಮುಂದೆ ಬಂದಿದ್ದಾರಂತೆ. ಮಾತುಕತೆ ಅಂತಿಮಹಂತದಲ್ಲಿದೆ ಎಂದು ನಿರ್ಮಾಪಕ ಆರ್ ಶ್ರೀನಿವಾಸ್ ತಿಳಿಸಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ – ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಚಿತ್ರ ಜನವರಿಯಲ್ಲಿ ತೆರೆಗೆ ಬರಲಿದೆ.ಆರ್ ಎಸ್ ಪ್ರೊಡಕ್ಷನ್ಸ್ ನಿರ್ಮಾಣದ ಚಿತ್ರಕ್ಕೆ ಓಂಪ್ರಕಾಶ್ ರಾವ್ ನಿರ್ದೇಶನ.ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ “ತ್ರಿಶೂಲಂ” ಚಿತ್ರ ಚಿತ್ರೀಕರಣ ಸಮಯದಲ್ಲೇ ಭಾರಿ ಸದ್ದು ಮಾಡುತ್ತಿದೆ.
ಇಂದಿನಿಂದ (ಅ26) ರಿಂದ ಹೈದರಾಬಾದ್ ನಲ್ಲಿ ಗಣೇಶ್ ಮಾಸ್ಟರ್ ಅವರ ಸಾರಥ್ಯದಲ್ಲಿ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಡೆಯಲಿದೆ. ಉಪೇಂದ್ರ, ರವಿಚಂದ್ರನ್ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಜನವರಿ ವೇಳೆಗೆ ಚಿತ್ರ ತೆರೆಗೆ ಬರಲಿದೆ.
****