21.8 C
Bengaluru
Wednesday, November 30, 2022
spot_img

ಹೆಣ್ಣು ಮಕ್ಕಳ ಪೋಷಕರಿಗೆ ಕರೆ ನೀಡಿದ ‘ಸಮಂತಾ’ ಏನು ಹೇಳಿದ್ದಾರೆ..?

ಸಮಂತಾ ವಿಚ್ಛೇದನ ಘೋಷಣೆ ಮಾಡಿದಾಗಿನಿಂದಲೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಆಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ನಿರಂತರವಾಗಿ ಪೋಸ್ಟ್​ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ವಿವಿಧ ರೀತಿಯ ಸಾಲುಗಳನ್ನು ಕೂಡ ಹಾಕುತ್ತಿದ್ದಾರೆ. ಈಗ ಸಮಂತಾ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಪೋಸ್ಟ್ ಮಾಡಿದ್ದಾರೆ.

‘ನಿಮ್ಮ ಮಗಳನ್ನು ಸಮರ್ಥವಾಗಿ ಬೆಳೆಸಿ. ಈ ಮೂಲಕ ತಾವು ಯಾರನ್ನು ಮದುವೆ ಆಗುತ್ತೇವೆ ಎನ್ನುವ ಚಿಂತೆಯೇ ಅವರಿಗೆ ಬರದಿರಲಿ. ಮಗಳ ಮದುವೆಗೆ ಹಣ ಕೂಡಿಡುವ ಬದಲು, ಅವರ ಶಿಕ್ಷಣಕ್ಕೆ ಆ ಹಣ ಬಳಸಿ. ಅವರನ್ನು ಮದುವೆಗೆ ಮಾನಸಿಕವಾಗಿ ಸಿದ್ಧಪಡಿಸುವ ಬದಲು ಅವರನ್ನು ವೈಯಕ್ತಿಕವಾಗಿ ಗಟ್ಟಿಗೊಳಿಸಿ. ಸೆಲ್ಫ್​ ಲವ್​, ಆತ್ಮವಿಶ್ವಾಸವನ್ನು ಅವರಲ್ಲಿ ಬೆಳೆಸಿ’ ಎಂದು ಸಮಂತಾ ಮನವಿ ಮಾಡಿಕೊಂಡಿದ್ದಾರೆ.

ನಟಿ ಸಮಂತಾ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ತಿಂಗಳಿಂದ ಹಲವು ಸುದ್ದಿಗಳು ಹರಿದಾಡಿದ್ದವು. ಅದರಲ್ಲಿ ಎಷ್ಟು ಸುಳ್ಳು, ಎಷ್ಟು ನಿಜ ಎಂಬುದು ತಿಳಿದಿಲ್ಲ. ನಾಗ ಚೈತನ್ಯ ಜೊತೆಗಿನ ಕಿರಿಕ್​, ವಿಚ್ಛೇದನ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಬಣ್ಣಬಣ್ಣದ ಗಾಸಿಪ್​ಗಳು ಕೇಳಿಬಂದಿದ್ದು ಸಮಂತಾಗೆ ನಿಜಕ್ಕೂ ಬೇಸರ ಮೂಡಿಸಿದೆ. ಹಾಗಾಗಿ ಸಮಂತಾ ಕಾನೂನು ಸಮರ ಸಾರಿದ್ದಾರೆ. ತಮ್ಮ ವಿರುದ್ಧ ಮಾನಹಾನಿ ಆಗುವಂತಹ ಮಾಹಿತಿಯನ್ನು ಪ್ರಸಾರ ಮಾಡಿದ ಯೂಟ್ಯೂಬರ್​ಗಳ ಮೇಲೆ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದರೆ ನ್ಯಾಯಾಲಯದಲ್ಲಿ ಸಮಂತಾಗೆ ಹಿನ್ನಡೆ ಆಗಿತ್ತು. ಹೈದರಾಬಾದ್​ನ ಸ್ಥಳೀಯ ನ್ಯಾಯಾಲಯದಲ್ಲಿ ಸಮಂತಾ ಈ ಮೊಕದ್ದಮೆ ಹೂಡಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles