31.5 C
Bengaluru
Tuesday, March 28, 2023
spot_img

ಸಾಧು ನಿರ್ದೇಶನದ ‘ಮಹಾಯೋಗಿ ಸಿದ್ದರೂಢ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಪುನೀತ್ ರಾಜಕುಮಾರ್

ಮಹಾಮಹಿಮ ಸಿದ್ದರೂಢರ ಜೀವನಾಧಾರಿತ ಚಿತ್ರವೊಂದು ನಿರ್ಮಾಣವಾಗಿದೆ. “ಮಹಾಯೋಗಿ ಸಿದ್ದರೂಢ” ಎಂಬ ಹೆಸರಿನ ಈ ಚಿತ್ರವನ್ನು ಖ್ಯಾತ ಸಂಗೀತ ನಿರ್ದೇಶಕ ಹಾಗೂ ನಿರ್ದೇಶಕ ಸಾಧುಕೋಕಿಲ ನಿರ್ದೇಶಿಸಿದ್ದಾರೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಟ್ರೇಲರ್ ಬಿಡುಗಡೆ ಮಾಡಿ, ಶುಭ ಕೋರಿದರು.

ಬಾಗಲಕೋಟೆಯ ಮುಧೋಳದ ಮಂಟೂರಿನ ಶ್ರೀ ಸದಾನಂದ ಮಹಾಸ್ವಾಮಿಗಳು ಈ ಚಿತ್ರ ನಿರ್ಮಾಣ ಮಾಡಿದ್ದಾರೆ.ನಮ್ಮ ಮನೆಗೂ, ಸಿದ್ದರೂಢ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಅಪ್ಪಾಜಿ ಅವರಾಗಲಿ, ನಮ್ಮ ಕುಟುಂಬದ ಯಾರೇ ಆಗಲಿ, ಹುಬ್ಬಳ್ಳಿಗೆ ಹೋದಾಗ ಸಿದ್ದರೂಢರ ಮಠಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತೇವೆ. ನಮ್ಮ ಅಜ್ಜಿ ಅವರು ಕೆಲವು ದಿನಗಳ ಕಾಲ ಈ ಮಠದಲ್ಲೇ ಇದ್ದರು ಎಂದು ಅಪ್ಪಾಜಿ ಹೇಳುತ್ತಿದ್ದರು. ಈ ಚಿತ್ರದ ಟ್ರೇಲರ್ ಬಿಡುಗಡೆಗೆ ಬರಬೇಕೆಂದು ಸಾಧುಕೋಕಿಲ ಅವರು ಕರೆದಾಗ ಸಂತೋಷವಾಯಿತು. ಟ್ರೇಲರ್ ತುಂಬಾ ಚೆನ್ನಾಗಿದೆ. ಸಿನಿಮಾ ನೋಡಲು ನಾನು ಕಾತುರನಾಗಿದ್ದೇನೆ ಎಂದರು ಪವರ್ ಸ್ಟಾರ್ ಪುನೀತ್ ರಾಜಕುಮಾರ್.

ಈ ಚಿತ್ರ ನಿರ್ದೇಶನಕ್ಕೆ ನನಗೆ ನನ್ನ ಪುತ್ರ ಸುರಾಗ್ ಮಾಡಿದ ಸಹಾಯ ಮರೆಯುವ ಹಾಗಿಲ್ಲ. ಇದೇ ನವೆಂಬರ್ 9ರಂದು ಮಂಟೂರಿನ ಚಿತ್ರಮಂದಿರದಲ್ಲಿ 55 ನಿಮಿಷಗಳ ಅವಧಿಯ ಈ ಚಿತ್ರ ಬಿಡುಗಡೆಯಾಗುತ್ತಿದೆ. ಅದೊಂದೆ ಕಡೆ ಮಾತ್ರ ಈ ಚಿತ್ರ ನಿರಂತರವಾಗಿ ಪ್ರದರ್ಶನವಾಗುತ್ತಿರುತ್ತದೆ ಎಂದರು ಚಿತ್ರದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕ ಸಾಧುಕೋಕಿಲ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles