ಬದುಕಿದ್ದಾಗ ಒಳ್ಳೆಯ ಮನುಷ್ಯ, ಉತ್ತಮ ನಟ ಎನಿಸಿಕೊಂಡಿದ್ದು ಮಾತ್ರವಲ್ಲದೆ ಸಾವಿನಲ್ಲಿಯೂ ಪುನೀತ್ ರಾಜ್ ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ಅವರ ಕಣ್ಣುಗಳನ್ನು ದಾನ ಮಾಡಲು ಕುಟುಂಬ ನಿರ್ಧರಿಸಿದೆ. ಅಣ್ಣಾವ್ರ ಸಾವಿನ ನಂತರವೂ ಅವರ ಕುಟುಂಬ ಅಣ್ಣವ್ರ ಕಣ್ಣುಗಳನ್ನು ದಾನ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
46 ವರ್ಷದ ಸ್ಯಾಂಡಲ್ ವುಡ್ ನ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಬೆಳಗ್ಗೆ 12 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಪತ್ನಿ ಅಶ್ವಿನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು, ನಟರು-ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ಅವರ ಅಭಿಮಾನಿಗಳು ತೀವ್ರ ದುಃಖಸಾಗರದಲ್ಲಿ ಮುಳುಗಿದ್ದಾರೆ.
****