ಹೃದಯಾಘಾತದಿಂದ ಕೊನೆಯುಸಿರೆಳೆದ ನಟ ಪುನೀತ್ ರಾಜ್ಕುಮಾರ್ ಅವರ ಅಗಲಿಕೆಗೆ ರಾಜೀಯ ನಾಯಕರು, ಅಭಿಮಾನಿಗಳು ಹಾಗೂ ಸಿನಿರಂಗದ ಕಲಾವಿದರು ಕಂಬನಿ ಮಿಡಿಯುತ್ತಿದ್ದಾರೆ. ನಟನ ಪಾರ್ಥೀವ ಶರೀರವನ್ನು ವಿಕ್ರಂ ಆಸ್ಪತ್ರೆಯಿಂದ ಮೊದಲು ಸದಾಶಿವನಗರದಲ್ಲಿರುವ ಅವರ ಮನೆಗೆ ತೆಗೆದುಕೊಂಡು ಹೋಗಲಾಗುವುದು. ನಂತರ ಅಲ್ಲಿಂದ ಸಂಜೆ ಹೊತ್ತಿಗೆ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಪುನೀತ್ ರಾಜ್ಕುಮಾರ್ ಅವರ ಮಗಳು ವಿದೇಶದಲ್ಲಿದ್ದು, ಅವರು ಬೆಂಗಳೂರಿಗೆ ಬಂದ ನಂತರ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಇನ್ನು, ಸುಮಾರು 500ಕ್ಕೂ ಹೆಚ್ಚು ಸಿಬ್ಬಂದಿಯಿಂದ ಅಂತಿಮ ದರ್ಶನಕ್ಕೆ ಸಿದ್ದತೆ ನಡೆಸಲಾಗುತ್ತಿದ್ದು, ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಲಾಗಿದೆ. 5 ಗಂಟೆ ಸುಮಾರಿಗೆ ಪಾರ್ಥೀವ ಶರೀರ ಕಂಠೀರವ ಕ್ರೀಡಾಂಗಣಕ್ಕೆ ಬರುವ ಸಾಧ್ಯತೆ ಇದ್ದು, 6 ಗಂಟೆಗೆ ಸಾರ್ವಜನಿಕ ದರ್ಶನಕ್ಕೆ ಅನುಮತಿ ಸಿಗಬಹುದು ಎನ್ನಲಾಗಿದೆ.
****