ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚಿತ್ರಪ್ರದರ್ಶನವನ್ನು ನಿಲ್ಲಿಸಲಾಗಿದೆ. ಈ ಕುರಿತು ಮೈಸೂರಿನಲ್ಲಿ ಕರ್ನಾಟಕದ ಚಲನಚಿತ್ರ ಪ್ರದರ್ಶಕರ ಮಹಾ ಮಂಡಲ್ ಉಪಾಧ್ಯಕ್ಷ ರಾಜಾರಾಮ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಪ್ರಾರಂಭವಾಗಿರುವ ಚಿತ್ರ ಪ್ರದರ್ಶನ ಮುಂದುವರೆಯುತ್ತಿವೆ. 2.30 ಶೋ ಹಾಗೂ 4.30ಯ ನಂತರದ ಶೋಗಳು ಕ್ಯಾನ್ಸಲ್ ಆಗಿವೆ. ಚಿತ್ರರಂಗ ಮೊದಲು ಈ ಶಾಕ್ ನಿಂದ ಹೊರ ಬರಬೇಕು. ಮುಂದೆ ಯಾವಾಗ ಚಿತ್ರ ಪ್ರದರ್ಶನ ಮಾಡಬೇಕು ನೋಡೋಣ. ಪುನೀತ್ ಅವರಿಗೆ ಈ ರೀತಿ ಆಗಿರೊದು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.
ಜೊತೆಗೆ ಹಲವು ಸಿನಿಮಾಗಳ ಚಿತ್ರೀಕರಣವನ್ನು ಚಿತ್ರತಂಡಗಳು ಸ್ವಯಂ ಆಗಿ ಬಂದ್ ಮಾಡಿಕೊಂಡಿವೆ. ಇಡೀ ಸ್ಯಾಂಡಲ್ ವುಡ್ ಪುನೀತ್ ಅಗಲಿಕೆಯಿಂದಾಗಿ ಶಾಕ್ ಗೆ ಒಳಗಾಗಿದೆ, ಶೋಕ ಸಾಗರದಲ್ಲಿ ಮುಳುಗಿದೆ.
****