22.9 C
Bengaluru
Friday, March 24, 2023
spot_img

ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಸಿದ್ದರಾಮಯ್ಯ ಒತ್ತಾಯ

ಅದ್ಭುತ ನಟನೆ ಮೂಲಕ ಗಮನ ಸೆಳೆದ ಪುನೀತ್​ ರಾಜ್​ಕುಮಾರ್​ ಅವರಿಗೆ ಸಾಕಷ್ಟು ಪ್ರಶಸ್ತಿಗಳು ಒಲಿದಿವೆ. ಡ್ಯಾನ್ಸ್​ನಲ್ಲಿ ಅವರಿಗೆ ಸರಿಸಾಟಿಯಾಗಿ ನಿಲ್ಲುವ ಮತ್ತೊಬ್ಬರು ಸಿಗೋಕೆ ಸಾಧ್ಯವಿಲ್ಲ. ಪುನೀತ್​ ಅವರದ್ದು ನಟನೆಯಲ್ಲೂ ಎತ್ತಿದ ಕೈ. ಅವರಿಗೆ ಶ್ರೇಷ್ಠ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂಬುದು ಅನೇಕರ ಒತ್ತಾಯವಾಗಿತ್ತು. ಅವರ ಮರಣಾ ನಂತರ ಈ ಕೂಗು ಮತ್ತಷ್ಟು ಹೆಚ್ಚಿದೆ. ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಈ ಬಗ್ಗೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ‘ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ಪುನೀತ್​ ನಿಧನದ ನಂತರ ಸಿದ್ದರಾಮಯ್ಯ ಸಾಕಷ್ಟು ಟ್ವೀಟ್​​ಗಳನ್ನು ಮಾಡಿದ್ದರು. ‘ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಲಾರದ ನಷ್ಟ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೊಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles