ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ‘ಆರ್ಆರ್ಆರ್’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಜ್ಯೂ. ಎನ್ಟಿಆರ್, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್ ಮುಖ್ಯಭೂಮಿಕೆ ನಿಭಾಯಿಸಿರುವ ಈ ಸಿನಿಮಾದ ಟೀಸರ್ ಈಗ ಬಿಡುಗಡೆ ಆಗಿದೆ. ಭಾರತೀಯ ಸಿನಿಮಾ ಜಗತ್ತಿನಲ್ಲಿ ಮಾಂತ್ರಿಕ ಎಂದೇ ಕರೆಸಿಕೊಳ್ಳುವ ನಿರ್ದೇಶಕ ರಾಜಮೌಳಿ ಅವರು ‘ಆರ್ಆರ್ಆರ್’ ಸಿನಿಮಾ ಮೂಲಕ ಮತ್ತೆ ಮೋಡಿ ಮಾಡುವುದು ಖಚಿತ ಎಂಬುದಕ್ಕೆ ಈ ಟೀಸರ್ ಸಾಕ್ಷಿ ಒದಗಿಸುತ್ತಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಟೀಸರ್ 40 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.
ಈ ಟೀಸರ್ ಅವಧಿ ಕೇವಲ 45 ಸೆಕೆಂಡ್ಗಳು. ಆದರೂ ಕೂಡ ಅದರಲ್ಲಿ ಅದ್ಭುತವನ್ನೇ ತೋರಿಸಿದ್ದಾರೆ ನಿರ್ದೇಶಕ ರಾಜಮೌಳಿ. ಅದ್ದೂರಿ ಸೆಟ್ಗಳು, ಭರ್ಜರಿ ಆ್ಯಕ್ಷನ್ ದೃಶ್ಯಗಳು, ಅತ್ಯಾಧುನಿಕ ವಿಎಫ್ಎಕ್ಸ್ ಸೇರಿದಂತೆ ಹಲವು ಅಂಶಗಳು ಗಮನ ಸೆಳೆಯುತ್ತಿವೆ. 2022ರ ಜ.7ರಂದು ‘ಆರ್ಆರ್ಆರ್’ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ. ಟೀಸರ್ ಹೀಗಿದೆ ಎಂದಮೇಲೆ, ಟ್ರೇಲರ್ ಹೇಗಿರಬಹುದು ಎಂಬ ಕೌತುಕ ಮೂಡಿದೆ. ಈ ಟೀಸರ್ನಲ್ಲಿ ಆಲಿಯಾ ಪಾತ್ರ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಟ್ರೇಲರ್ನಲ್ಲಿ ಅವರ ಪಾತ್ರದ ಬಗ್ಗೆ ಮತ್ತಷ್ಟು ಅಪ್ಡೇಟ್ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.