ಕರ್ನಾಟಕ ಚಲನಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ಕುಮಾರ್ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಚಿತ್ರರಂಗ ಸೇರಿದಂತೆ ರಾಜ್ಯದಲ್ಲೇ ಶೋಕಸಾಗರದಲ್ಲಿತ್ತು. ಇದೀಗ ಚಿತ್ರದುರ್ಗದ ಮುರುಘಾ ಮಠದಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.
2022ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನ ಪುನೀತ್ ರಾಜ್ಕುಮಾರ್ ಅವರಿಗೆ ನೀಡುವುದಾಗಿ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ. ಮುಂದಿನ ವರ್ಷ 2022ರ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎನ್ನಲಾಗಿದೆ. ಚಿತ್ರದುರ್ಗದ ಮುರುಘಾಮಠದ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಬಸವಶ್ರೀ ಪ್ರಶಸ್ತಿಯ ಮೊತ್ತ ಐದು ಲಕ್ಷ ರೂ ನಗದು ಹಾಗೂ ಸ್ಮರಣಿಕೆ ನೀಡಿ ಒಳಗೊಂಡಿದೆ. ಈ ಕಾರ್ಯಕ್ರಮಕ್ಕೆ ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅವರನ್ನು ಆಹ್ವಾನಿಸಲಾಗುವುದು ಎಂದು ಮುರುಘಾ ಮಠದ ಶಿವಮೂರ್ತಿ ಶರಣರು ತಿಳಿಸಿದ್ದಾರೆ.
****