ಶಿವಮೊಗ್ಗದ ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ನಿನ್ನೆ (ನವೆಂಬರ್ 10) ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಯ ನೆನಪಲ್ಲೇ ಆನೆ ಮರಿಗೆ ಪುನೀತ್ ಎಂದು ಹೆಸರಿಟ್ಟಿದ್ದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆಗೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆ ಜನಿಸಿತ್ತು. ಕೆಲ ತಿಂಗಳ ಹಿಂದೆಯಷ್ಟೇ ಸಕ್ರೆಬೈಲು ಆನೆ ಬಿಡಾರಕ್ಕೆ ಪುನೀತ್ ಭೇಟಿ ನೀಡಿದ್ದರು. ವನ್ಯಜೀವಿ ಸಂಬಂಧಿತ ಸಾಕ್ಷ್ಯಚಿತ್ರದ ಚಿತ್ರೀಕರಣದ ಸಲುವಾಗಿ ಅವರು ಸಕ್ರೆಬೈಲಿಗೆ ಬಂದಿದ್ದರು. ಈ ವೇಳೆ ಮರಿಯಾನೆ ಕಂಡು ಖುಷಿಯಿಂದ ಅವರು ಮುದ್ದಾಡಿದ್ದರು. ಹಾಗಾಗಿ ಮರಿ ಆನೆಗೆ ಪುನೀತ್ ಎಂದೇ ನಾಮಕರಣ ಮಾಡಲಾಗುತ್ತಿದೆ.’ ಎಂದು ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಎಫ್ಒ ಐ.ಎಂ.ನಾಗರಾಜ್ ತಿಳಿಸಿದ್ದಾರೆ.
****