ಬಹುತೇಕ ಉತ್ತರ ಕರ್ನಾಟಕದವರೇ ಸೇರಿ ನಿರ್ಮಿಸಿರುವ ‘ಲಕ್ಷ್ಯ’ ಚಿತ್ರ ಮುಂದಿನವಾರ ತೆರೆಕಾಣಲಿದೆ. ನೈಜ ಘಟನೆಗಳನ್ನು ಆಧರಿಸಿ ಒಂದು ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ನಿರ್ಮಾಣವಾದ ಈ ಚಿತ್ರ ಇದೇ ನವೆಂಬರ್ 18 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಬೆಳಗಾವಿಯ ಪ್ರಕಾಶ ಚಿತ್ರ ಮಂದಿರದಲ್ಲಿ 14ನೇ ನವಂಬರ್ ರಂದು,ಬೆಳಿಗ್ಗೆ 9 ಗಂಟೆಗೆ ಈ ಚಿತ್ರದ ಪ್ರೀಮಿಯರ್ ಷೋ ನಡೆಯಲಿದ್ದು ಬಹಳಷ್ಟು ಸೆಲೆಬ್ರಿಟಿಗಳು ಹಾಜರಾಗಲಿದ್ದಾರೆ.ಜುವಿನ್ ಸಿಂಗ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಬನಹಟ್ಟಿಯ ಆನಂದ್ ಶಿವಯೋಗಪ್ಪ ಕೊಳಕಿ, ಸುಧೀರ್ ದೇವೇಂದ್ರ ಹುಲ್ಲೋಳಿ, ಶಿವಕುಮಾರ್ ಎ, ರವಿ ಸಾಸನೂರ್ ಈ ಚಿತ್ರದ ಸಹ ನಿರ್ಮಾಣ ಮಾಡಿದ್ದಾರೆ. ನಿರ್ದೇಶನ ಎ, ರವಿ ಸಾಸನೂರ್ ಮಾಡಿದ್ದಾರೆ.
ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿರುವ ನಿತಿನಾದ್ವಿ ‘ಲಕ್ಷ್ಯ’ ಸಿನಿಮಾದಲ್ಲಿ ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನನ್ನದು ಪಿಕೆ ಎನ್ನುವ ಪಾತ್ರ, ಸಮಾಜದಲ್ಲಿ ಜವಾಬ್ದಾರಿ ಇರುವಂಥ ವ್ಯಕ್ತಿಗಳು ಅದನ್ನು ಮರೆತಾಗ ಅವರಿಗೆ ಬುದ್ದಿ ಕಲಿಸುವಂಥ ಪಾತ್ರ ಎಂದು ಕನ್ನಡ ಪಿಚ್ಚರ್ ನೊಂದಿಗೆ ಮಾತನಾಡಿದ್ದಾರೆ.
****